ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದನವನ | ಅಕ್ಷಿತ್‌ ಈಗ ಆದಿತ್ಯ ಶಶಿಕುಮಾರ್‌

Published 30 ಮೇ 2024, 23:30 IST
Last Updated 30 ಮೇ 2024, 23:30 IST
ಅಕ್ಷರ ಗಾತ್ರ

‘ಓ ಮೈ ಲವ್‌’ ಸಿನಿಮಾ ಖ್ಯಾತಿಯ ನಟ, ನಟ ಶಶಿಕುಮಾರ್‌ ಪುತ್ರ ಅಕ್ಷಿತ್‌ ಶಶಿಕುಮಾರ್‌ ಇದೀಗ ಹೆಸರು ಬದಲಾಯಿಸಿಕೊಂಡು ‘ಕಾದಾಡಿ’ ಎನ್ನುವ ಪ್ರಾಜೆಕ್ಟ್‌ ಕೈಗೆತ್ತಿಕೊಂಡಿದ್ದಾರೆ. 

ಅಕ್ಷಿತ್ ಶಶಿಕುಮಾರ್ ಬದಲಾಗಿ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಾಯಿಸಿಕೊಂಡಿದ್ದು, ಸತೀಶ್‌ ಮಾಲೆಂಪಾಟಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು, ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸಿದ್ಧಗೊಂಡಿರುವ ಈ ಸಿನಿಮಾವನ್ನು ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಲಾಗಿದೆ. ಪ್ರಚಾರ ಆರಂಭಿಸಿರುವ ಚಿತ್ರತಂಡ ಇತ್ತೀಚೆಗೆ ಎರಡನೇ ಲಿರಿಕಲ್ ವಿಡಿಯೊ ಹಾಡನ್ನು ಬಿಡುಗಡೆ ಮಾಡಿದೆ. ಎನ್.ಮಾರುತಿ ಸಾಹಿತ್ಯದ ‘ಸೋತರೂ ಗೆಲ್ಲುವ ಛಲವು ಇರಬೇಕು’ ಎಂಬ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದಾರೆ. ‘ನಮ್ಮ ಜೀವನವನ್ನು ತ್ಯಾಗ ಮಾಡುವ ಮೂಲಕ ಸಮಾಜಕ್ಕೆ ಏನನ್ನಾದರೂ ಕೊಡಬೇಕು. ನಾವು ದಿನದಿಂದ ದಿನಕ್ಕೆ ಹೋರಾಟ ನಡೆಸುತ್ತಿದ್ದೇವೆ. ಇಂತಹ ಅಂಶಗಳನ್ನು ಥ್ರಿಲ್ಲರ್ ಮೂಲಕ ತೋರಿಸುವ ಪ್ರಯತ್ನ ಮಾಡಲಾಗಿದೆ’ ಎಂದಿದ್ದಾರೆ ಸತೀಶ್‌. 

ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್ ಚಿತ್ರದ ನಾಯಕಿಯರು. ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ ಮನೋಹರ್, ಶ್ರವಣ್‌ ರಾಘವೇಂದ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ. ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜನೆ, ಡಿ.ಯೋಗಿಪ್ರಸಾದ್ ಛಾಯಾಚಿತ್ರಗ್ರಹಣ, ಪ್ರಕಾಶ್‌ ತೋಟ ಸಂಕಲನ ಚಿತ್ರಕ್ಕಿದೆ. ಗೋವಾ, ಚಿಕ್ಕಮಗಳೂರು, ಹೈದರಾಬಾದ್, ಚೆನ್ನೈ ಮುಂತಾದೆಡೆ ಚಿತ್ರದ ಚಿತ್ರೀಕರಣ ನಡೆದಿದೆ. ಸಿನಿಮಾ ಜೂನ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT