ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಮ್‌ನಲ್ಲಿ ವರ್ಕೌಟ್‌: ಚಂದನ್‌ ಕುಮಾರ್‌ ಫಿಟ್ನೆಸ್‌ಗೆ ಅಭಿಮಾನಿಗಳು ಫಿದಾ

Last Updated 28 ಆಗಸ್ಟ್ 2021, 8:12 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಧಾರಾವಾಹಿ ಮತ್ತು ಸಿನಿಮಾ ಚಿತ್ರೀಕರಣದಿಂದ ಬಿಡುವು ಪಡೆದುಕೊಂಡಿದ್ದ ನಟ ಚಂದನ್‌ ಕುಮಾರ್, ದೇಹದಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಈ ಕುರಿತು ಚಂದನ್‌ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಫೋಟೊವೊಂದನ್ನು ಹಂಚಿಕೊಂಡಿದ್ದಾರೆ. ಜೂನ್ 21ರ ಫೋಟೊದಲ್ಲಿ ಚಂದನ್‍ಗೆ ಹೊಟ್ಟೆ ಬಂದಿತ್ತು. ಆದರೆ, ಆಗಸ್ಟ್ 26ರ ಫೋಟೊದಲ್ಲಿ ಅವರು ಸಖತ್ ಫಿಟ್ ಆಗಿ ಕಾಣಿಸಿಕೊಂಡಿದ್ದಾರೆ.

ದೇಹದಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿರುವ ಚಂದನ್‌ ಫೋಟೊ ನೋಡಿರುವ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸದ್ಯ ಇದೀಗ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕೋವಿಡ್‌ ಲಾಕ್‍ಡೌನ್‌ನಿಂದಾಗಿ ನಟ–ನಟಿಯರು ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದ್ದರಿಂದ ಅನೇಕರು ಫಿಟ್ನೆಸ್ ಕಳೆದುಕೊಂಡಿದ್ದಾರೆ. ಇವರಲ್ಲಿ ಚಂದನ್ ಕುಮಾರ್ ಕೂಡ ಹೊರತಲ್ಲ. ಆದರೆ ಕೇವಲ ಎರಡೇ ತಿಂಗಳಲ್ಲಿ ಅವರ ದೇಹದಲ್ಲಿ ಸಾಕಷ್ಟು ಬದಲಾವಣೆ ಆಗಿದೆ.

ಕಳೆದ ಮೇ ತಿಂಗಳಲ್ಲಿ ಚಂದನ್‌ ಅವರು ನಟಿ ಕವಿತಾ ಗೌಡ ಅವರೊಂದಿಗೆ ಮದುವೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT