ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್‌ ಲುಕ್‌ನಲ್ಲಿ ಧನ್ವೀರ್; ಮತ್ತೊಂದು ಸಿನಿಮಾಗೆ ಹಸಿರು ನಿಶಾನೆ

Published 14 ಸೆಪ್ಟೆಂಬರ್ 2023, 16:22 IST
Last Updated 14 ಸೆಪ್ಟೆಂಬರ್ 2023, 23:30 IST
ಅಕ್ಷರ ಗಾತ್ರ

‘ಬಜಾರ್‌’, ‘ಬೈ ಟು ಲವ್‌’ ಸಿನಿಮಾ ಖ್ಯಾತಿಯ ನಟ ಧನ್ವೀರ್‌ ನಟನೆಯ ಹೊಸ ಸಿನಿಮಾ ‘ವಾಮನ’ ಬಿಡುಗಡೆಗೆ ಸಜ್ಜಾಗುತ್ತಿದೆ. ಇದೇ ಹೊತ್ತಿನಲ್ಲಿ ಮತ್ತೊಂದು ಸಿನಿಮಾಗೆ ಧನ್ವೀರ್‌ ಹಸಿರು ನಿಶಾನೆ ನೀಡಿದ್ದಾರೆ. 

ಧನ್ವೀರ್ ಜನ್ಮದಿನದಂದು ಹೊಸ ಚಿತ್ರದ ಘೋಷಣೆಯಾಗಿದ್ದು, ಇದು ಧನ್ವೀರ್ ನಾಯಕರಾಗಿ ನಟಿಸುತ್ತಿರುವ ಐದನೇ ಸಿನಿಮಾ ಆಗಿರಲಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಘುಕುಮಾರ್ ಓ. ಆರ್. ನಿರ್ದೇಶಿಸಲಿದ್ದಾರೆ. ಕಥೆಯೂ ರಘು ಅವರದ್ದು. ರಘುಕುಮಾರ್ ಅವರ ನಿರ್ದೇಶನದ ಚೊಚ್ಚಲ ಚಿತ್ರ ಇದಾಗಿದ್ದು, ‘ಸಮೃದ್ಧಿ ಫಿಲಂಸ್’ ಲಾಂಛನದಲ್ಲಿ ಇದು ನಿರ್ಮಾಣವಾಗುತ್ತಿದೆ. ರಘು ಅವರು ಈ ಹಿಂದೆ ‘ಕೋಟಿಗೊಬ್ಬ–3’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. 

‘ರಂಗಾಯಣ ರಘು , ರವಿಶಂಕರ್, ತಬಲನಾಣಿ, ಸಾಧುಕೋಕಿಲ ಇನ್ನಿತರ ಕಲಾವಿದರು ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣ ಆರಂಭ ವಾಗಲಿದೆ’ ಎಂದಿದೆ ಚಿತ್ರತಂಡ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT