ಗುರುವಾರ , ಆಗಸ್ಟ್ 5, 2021
28 °C

ಖ್ಯಾತ ನಟ ಧ್ರುವ ಸರ್ಜಾ, ಪತ್ನಿ ಪ್ರೇರಣಾರಿಗೂ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ದಿನದಿಂದ ದಿನಕ್ಕೆ ಕೋವಿಡ್-19 ಸೋಂಕು ಪ್ರಕರಣಗಳು ಜಾಸ್ತಿಯಾಗುತ್ತಲೇ ಇದ್ದು, ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

ಧ್ರುವ ಸರ್ಜಾ ಅವರೇ ಸ್ವತಃ ಈ ವಿಚಾರವನ್ನು ತಿಳಿಸಿದ್ದು, ನಾನು ಮತ್ತು ನನ್ನ ಹೆಂಡತಿ ಇಬ್ಬರಿಗೂ ಕೆಲ ರೋಗ ಲಕ್ಷಣಗಳೊಂದಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಆದ್ದರಿಂದ ನಮ್ಮನ್ನು ಆಸ್ಪತ್ರೆಗೆ ಸೇರಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಗುಣಮುಖರಾಗಿ ಹಿಂತಿರುಗುತ್ತೇವೆ ಎಂದು ನನಗೆ ನಂಬಿಕೆಯಿದೆ. ನಮ್ಮೊಂದಿಗೆ ಸಂಪರ್ಕ ಹೊಂದಿದವರೆಲ್ಲರೂ ದಯವಿಟ್ಟು ನಿಮ್ಮನ್ನು ಪರೀಕ್ಷಿಸಿಕೊಂಡು ಸುರಕ್ಷಿತವಾಗಿರಿ. ಜೈ ಆಂಜನೇಯ ಎಂದು ಟ್ವೀಟ್ ಮಾಡಿದ್ದಾರೆ.

ಮೊನ್ನೆಯಷ್ಟೇ ಬಾಲಿವುಡ್‌ನ ಖ್ಯಾತ ನಟ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯಾ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು