ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ರಾಕ್ಷಸ’ನ ಟ್ರೇಲರ್‌ ಬಿಡುಗಡೆ

Published : 13 ಆಗಸ್ಟ್ 2024, 0:00 IST
Last Updated : 13 ಆಗಸ್ಟ್ 2024, 0:00 IST
ಫಾಲೋ ಮಾಡಿ
Comments

ನಟ ಪ್ರಜ್ವಲ್‌ ದೇವರಾಜ್‌ ನಟನೆಯ ‘ರಾಕ್ಷಸ’ ಸಿನಿಮಾದ ಟ್ರೇಲರ್‌ ಬಿಡುಗಡೆಗೊಂಡಿದೆ. ‘ಮಮ್ಮಿ’ ಮತ್ತು ‘ದೇವಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ಲೋಹಿತ್ ಎಚ್‌.ನಿರ್ದೇಶನದ ಈ ಸಿನಿಮಾ ಸೆಪ್ಟೆಂಬರ್‌ನಲ್ಲಿ ತೆರೆಕಾಣಲಿದೆ.

ಇತ್ತೀಚೆಗಷ್ಟೇ ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಟಿ ಪ್ರಿಯಾಂಕಾ ಉಪೇಂದ್ರ ಟ್ರೇಲರ್‌ ರಿಲೀಸ್‌ ಮಾಡಿದರು. ಈ ವೇಳೆ ಮಾತನಾಡಿದ ಪ್ರಜ್ವಲ್‌ ದೇವರಾಜ್‌, ‘ನನಗೆ ಹಾರರ್ ಸಿನಿಮಾಗಳೆಂದರೆ ಭಯ. ಹೆಂಡತಿ ಸೆರಗಿನ ಹಿಂದೆ ಬಚ್ಚಿಟ್ಟುಕೊಂಡು ಹಾರರ್ ಸಿನಿಮಾ ನೋಡುವವನು ನಾನು. ಆದರೆ ಈಗ ನಾನೇ ಹಾರರ್ ಸಿನಿಮಾದಲ್ಲಿ ನಟಿಸಿದ್ದೇನೆ. ಇದಕ್ಕೆ ಕಾರಣ ಲೋಹಿತ್. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ’ ಎಂದರು.

‘ಈ ಸಿನಿಮಾದ ವಿಶೇಷ ಏನೆಂದರೆ ಹಾರರ್ ಜೊತೆಗೆ ಟೈಮ್ ಲೂಪ್ ವಿಷಯವನ್ನು ಇಲ್ಲಿ ಅಳವಡಿಸಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಚಂದನವನದಲ್ಲಿ ಇಂತಹ ಭಿನ್ನ ಪ್ರಯತ್ನ ನಡೆದಿದೆ’ ಎಂದಿದೆ ಚಿತ್ರತಂಡ. ಚಿತ್ರದ ಸಂಪೂರ್ಣ ಶೂಟಿಂಗ್‌ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ನಡೆದಿದೆ. ಸಿನಿಮಾದಲ್ಲಿ ಪ್ರಜ್ವಲ್ ಜೊತೆಯಾಗಿ ಅರುಣ್ ರಾಥೋಡ್, ಶ್ರೀಧರ್, ಗೌತಮ್, ಸೋಮಶೇಖರ್‌ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ಶಾನ್ವಿ ಎಂಟರ್ಪ್ರೈಸಸ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಕಮರ್ಷಿಯಲ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಪ್ರಜ್ವಲ್ ಇದೇ ಮೊದಲ ಬಾರಿಗೆ ಹಾರಾರ್ ಸಿನಿಮಾವೊಂದರ ಮೂಲಕ ಪ್ರೇಕ್ಷಕರೆದುರಿಗೆ ಬರುತ್ತಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT