ಗುರುವಾರ , ಜನವರಿ 20, 2022
15 °C

ಸಂಕ್ರಾಂತಿ ಸಡಗರ: ನಟ ಉಪೇಂದ್ರ ಮನೆಯಲ್ಲಿ ಸಂಭ್ರಮದಿಂದ ಆಚರಣೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ಯಾಂಡಲ್‌ವುಡ್‌ ರಿಯಲ್‌ ಸ್ಟಾರ್ ಉಪೇಂದ್ರ ಅವರು ಕುಟುಂಬಸ್ಥರೊಂದಿಗೆ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಿದ್ದಾರೆ. ಜತೆಗೆ, ಹಬ್ಬದ ಪ್ರಯಕ್ತ ಅಭಿಮಾನಿಗಳಿಗೆ ಶುಭಾಶಯ ಕೋರಿದ್ದಾರೆ.

ಉಪೇಂದ್ರ -ಪ್ರಿಯಾಂಕಾ ದಂಪತಿ ಮನೆಯಲ್ಲಿ ಪ್ರತಿ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸುತ್ತಾರೆ. ಅದೇ ರೀತಿ ಈ ಬಾರಿ ಸಂಕ್ರಾಂತಿ ಹಬ್ಬವನ್ನು ಉಪೇಂದ್ರ ಅವರು ಪತ್ನಿ ಪ್ರಿಯಾಂಕಾ ಮತ್ತು ಮಕ್ಕಳಾದ ಐಶ್ವರ್ಯಾ, ಆಯುಷ್ ಜತೆಗೆ ಸಡಗರದಿಂದ ಆಚರಿಸಿದ್ದಾರೆ.

ಸಂಭ್ರಮದ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಿಯಾಂಕಾ, ‘ಸಂಕ್ರಾಂತಿ ಹಬ್ಬದ ಶುಭಾಶಯಗಳು’ ಎಂದು ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.

ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕೂಡ ಉಪೇಂದ್ರ ದಂಪತಿಗೆ ಶುಭಾಶಯ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು