ಶುಕ್ರವಾರ, ಜನವರಿ 21, 2022
29 °C

ನಟಿ ಅಮೂಲ್ಯ ಬೇಬಿ ಬಂಪ್ ಫೋಟೊ ವೈರಲ್‌, ಅಭಿಮಾನಿಗಳಿಂದ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಜಗದೀಶ್‌ ಅವರು ತುಂಬು ಗರ್ಭಿಣಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಅವರು ಬೇಬಿ ಬಂಪ್ ಫೋಟೊಶೂಟ್‌ ಮಾಡಿಸಿದ್ದು, ಇದೀಗ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತುಂಬು ಗರ್ಭಿಣಿಯಾಗಿರುವ ಅವರು ಪತಿ ಜಗದೀಶ್‌ ಜೊತೆಗೆ ಫೋಟೊಶೂಟ್ ಮಾಡಿಸಿದ್ದು, ಈ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹೃದಯದ ಎಮೋಜಿಯೊಂದಿಗೆ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ... ದೋಸೆ, ಬೆಂಕಿ –ನಗು: ಕುಟುಂಬದೊಂದಿಗೆ ಸಂಕ್ರಾಂತಿ ಆಚರಿಸಿದ ಮೆಗಾಸ್ಟಾರ್ ಚಿರಂಜೀವಿ

ಕೆಲ ದಿನಗಳ ಹಿಂದೆ ತಾವು ತಾಯಿಯಾಗುತ್ತಿರುವುದಾಗಿ ಅಮೂಲ್ಯ ಹೇಳಿದ್ದರು.  ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡಿದ್ದ ಅವರು 'ನಾವೀಗ ಇಬ್ಬರೇ ಅಲ್ಲ' 2022ರಲ್ಲಿ ಮೂವರಾಗುತ್ತಿದ್ದೇವೆ ಎಂದು ಬರೆದುಕೊಂಡಿದ್ದರು.

ಅಮೂಲ್ಯ ಸ್ಯಾಂಡಲ್‍ವುಡ್‍ಗೆ ಬಾಲನಟಿಯಾಗಿ ಪದಾರ್ಪಣೆ ಮಾಡಿದರು. ಬಳಿಕ ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ನಟಿಯಾಗಿ  ಮಿಂಚಿದರು. ಅಮೂಲ್ಯ 2017ರಲ್ಲಿ ಜಗದೀಶ್ ಅವರನ್ನು ಮದುವೆಯಾದರು.

ಇದನ್ನೂ ಓದಿ... ಸಂಕ್ರಾಂತಿ ಸಡಗರ: ನಟ ಉಪೇಂದ್ರ ಮನೆಯಲ್ಲಿ ಸಂಭ್ರಮದಿಂದ ಆಚರಣೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು