ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಯರ್‌ ಪಾತ್ರದಲ್ಲಿ ಪ್ರೇಮಾ

Last Updated 18 ನವೆಂಬರ್ 2021, 19:30 IST
ಅಕ್ಷರ ಗಾತ್ರ

‘ಉಪೇಂದ್ರ ಮತ್ತೆ ಬಾ’ ಸಿನಿಮಾ ನಂತರ ಸ್ಯಾಂಡಲ್‌ವುಡ್‌ನಿಂದ ಕೆಲ ವರ್ಷ ದೂರವೇ ಉಳಿದಿದ್ದ ನಟಿ ಪ್ರೇಮಾ ಇದೀಗ ಮತ್ತೆ ಚಂದನವನದಲ್ಲಿ ಬಣ್ಣ ಹಚ್ಚಿದ್ದಾರೆ.

ವಿಕ್ರಮ್‌ ಪ್ರಭು ನಿರ್ದೇಶನದ ಚೊಚ್ಚಲ ಚಿತ್ರ, ಡಾರ್ಕ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ‘ವೆಡ್ಡಿಂಗ್‌ ಗಿಫ್ಟ್‌’ನಲ್ಲಿ ಲಾಯರ್‌ ಪಾತ್ರದಲ್ಲಿ ಪ್ರೇಮಾ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನ ಹನುಮಂತನಗರದಲ್ಲಿರುವ ಕುಮಾರಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಕ್ಲ್ಯಾಪ್‌ ಮಾಡುವ ಮುಖಾಂತರ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಪ್ರೇಮಾ ಕ್ಯಾಮೆರಾ ಚಾಲನೆ ಮಾಡಿದರು.

ಚಿತ್ರದ ಕುರಿತು ಮಾತಿಗಿಳಿದ ವಿಕ್ರಮ್‌ ಪ್ರಭು, ‘ನಿಶಾನ್ ನಾಣಯ್ಯ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದು, ನಾಯಕಿಯಾಗಿ ಸೋನು ಗೌಡ ಅಭಿನಯಿಸುತ್ತಿದ್ದಾರೆ. ಪ್ರೇಮಾ ನಾಲ್ಕು ವರ್ಷಗಳ ನಂತರ ಮತ್ತೆ ಬಣ್ಣಹಚ್ಚಿದ್ದು, ನಮ್ಮ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪವಿತ್ರ ಲೋಕೇಶ್, ಯಮುನ ಶ್ರೀನಿಧಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಮಂಗಳೂರಿನಲ್ಲಿ ನಲವತ್ತೈದು ದಿನ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಮಾರ್ಚ್‌ನಲ್ಲಿ ಚಿತ್ರ ಬಿಡುಗಡೆ ಸಾಧ್ಯತೆ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT