ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗಲ್ರಾನಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
ಅತ್ತ ಸಂಜನಾ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇತ್ತ ತಂಗಿ ನಿಕ್ಕಿ ಗಲ್ರಾನಿ ತೆಲುಗು ನಟ ಆದಿ ಅವರೊಂದಿಗೆ ಮದುವೆಯಾಗಿದ್ದಾರೆ.
ಸಂಜನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ –ಮಗು ಆರೋಗ್ಯವಾಗಿದ್ದಾರೆ ಎಂದು ಖಾಸಗಿ ಆಸ್ಪತ್ರೆ ವೈದ್ಯೆ ಶಿಲ್ಪಾ ರೆಡ್ಡಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಾಯಿಯಾಗುತ್ತಿರುವ ಸಂತಸ ಹಂಚಿಕೊಂಡಿದ್ದ ಸಂಜನಾ, ಸದ್ಯದಲ್ಲೇ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದರು.
ಓದಿ... 39ನೇ ವಸಂತಕ್ಕೆ ಕಾಲಿಟ್ಟ ಜೂ.ಎನ್ಟಿಆರ್: ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ
‘ಗಂಡ ಹೆಂಡತಿ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ ಸಂಜನಾ, ಕನ್ನಡ ಸೇರಿದಂತೆ ತೆಲುಗು, ತಮಿಳಿನ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಿನಿ ಪಯಣ ಆರಂಭದಿಂದಲೂ ವೈಯಕ್ತಿಕ ಜೀವನದ ಬಗ್ಗೆ ಎಲ್ಲಿಯೂ, ಯಾವ ವಿಷಯವನ್ನೂ ಹಂಚಿಕೊಂಡಿರಲಿಲ್ಲ.
ಓದಿ... ಸಪ್ತಪದಿ ತುಳಿದ ನಟಿ ನಿಕ್ಕಿ ಗಲ್ರಾನಿ, ಆದಿ ಪಿನಿಶೆಟ್ಟಿ: ಮದುವೆ ಫೋಟೊಗಳು ವೈರಲ್
ನಿಕ್ಕಿ –ಆದಿ ಮದುವೆ
ನಟಿ ನಿಕ್ಕಿ ಗಲ್ರಾನಿ ಅವರು ತೆಲುಗು ನಟ ಆದಿ ಪಿನಿಶೆಟ್ಟಿ ಅವರನ್ನು ಮದುವೆಯಾಗಿದ್ದಾರೆ. ಅದ್ದೂರಿ ಮದುವೆಯ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ಬುಧವಾರ (ಮೇ 18) ಚೆನ್ನೈನಲ್ಲಿ ಮದುವೆಯಾಗಿದ್ದಾರೆ. ಈ ವಿವಾಹ ಕಾರ್ಯಕ್ರಮಕ್ಕೆ ಎರಡು ಕುಟುಂಬಗಳ ಸದಸ್ಯರು ಮತ್ತು ಆಪ್ತರು ಮಾತ್ರವೇ ಭಾಗವಹಿಸಿದ್ದರು. ತೀರ ಖಾಸಗಿಯಾಗಿ ನಡೆದ ಈ ಮದುವೆ ಅದ್ದೂರಿಯಾಗಿ ನಡೆದಿದೆ ಎಂದು ಅವರು ಆಪ್ತರು ಹೇಳಿದ್ದಾರೆ.
ಓದಿ... ನಟಿ ಸಂಜನಾ ಗಲ್ರಾನಿ ಬೇಬಿ ಬಂಪ್ ಫೋಟೊ ವೈರಲ್, ಅಭಿಮಾನಿಗಳಿಂದ ಮೆಚ್ಚುಗೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.