ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಶೋಕ ಬ್ಲೇಡ್‌’ ಸಾವಿರ ಜನರ ಯುದ್ಧದ ಕಥೆ

Last Updated 17 ಮೇ 2022, 8:38 IST
ಅಕ್ಷರ ಗಾತ್ರ

‘ಅಶೋಕ ಬ್ಲೇಡ್‌’ಗೆಧರ್ಮಗಿರಿ ಶ್ರೀಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇತ್ತೀಚೆಗೆ ಚಾಲನೆ ಸಿಕ್ಕಿದೆ. ನೀನಾಸಂ ಸತೀಶ್‌ ಈ ಚಿತ್ರದ ನಾಯಕ.ಚಿತ್ರದ ಮೊದಲ ಸನ್ನಿವೇಶಕ್ಕೆ ಪಿ.ಶೇಷಾದ್ರಿ ಆರಂಭಫಲಕ ತೋರಿದರು. ಟಿ.ಎನ್.ಸೀತಾರಾಂ ಕ್ಯಾಮೆರಾ ಚಾಲನೆ ಮಾಡಿದರು.

ವಿನೋದ್ ದೋಂಡಾಳೆ ಚಿತ್ರದ ನಿರ್ದೇಶಕರು. ನರಹರಿ ನಿರ್ಮಾಪಕರು.

‘ವರ್ಧನ್ ಮತ್ತು ದೀಪಕ್ ನಾಯ್ಡು ಅವರ ಜತೆ ಸೇರಿ 10 ವರ್ಷಗಳ ಹಿಂದೆ ಒಂದು ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿ, ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದೇವೆ. ಒಂದು ಚಿತ್ರ ನಿರ್ಮಾಣ ಮಾಡುವ ಯೋಚನೆ ಇತ್ತು. ಟಿ.ಕೆ. ದಯಾನಂದ್ ಅವರ ಹತ್ತಿರ ಒಂದೊಳ್ಳೆಯ ಕಥೆ ಇದೆ ಎಂದು ಗೊತ್ತಾಯಿತು. ಕಥೆ ಇಷ್ಟವಾಯಿತು. ಇದೇ ನಮ್ಮ ಸಂಸ್ಥೆಯ ಮೊದಲ ಚಿತ್ರವಾಗಬೇಕು ಎಂದು ತೀರ್ಮಾನಿಸಿ ಚಿತ್ರ ಮಾಡುತ್ತಿದ್ದೇವೆ. ಸತೀಶ್ ನೀನಾಸಂ ಸಹ ಕೈ ಜೋಡಿಸಿದ್ದಾರೆ. ವರ್ತಕರು ಮತ್ತು ಕಾರ್ಮಿಕರ ನಡುವೆ ನಡೆಯುವ ಯುದ್ಧದ ಕುರಿತು ಈ ಚಿತ್ರಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ವಿನೋದ್‌ ದೋಂಡಾಳೆ ಮಾಹಿತಿ ನೀಡಿದರು.

‘10 ನಿಮಿಷಗಳ ಕಾಲ ಸಾವಿರ ಜನ ಭಾಗವಹಿಸುವ ಯುದ್ಧ. ಅದನ್ನು ವಿನೋದ್ ಸಮರ್ಥವಾಗಿ ತೆರೆಯ ಮೇಲೆ ತರುತ್ತಾರೆ ಎಂಬ ನಂಬಿಕೆ ಇದೆ. ಈ ಯುದ್ಧದಲ್ಲಿ ಒಬ್ಬ ಸೂಪರ್ ಸ್ಟಾರ್ ಕಾಣಿಸಿಕೊಳ್ಳಲಿದ್ದಾರೆ. ಉತ್ತರಖಂಡ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ನಾಳೆಯಿಂದ ಚಿತ್ರೀಕರಣ ಶುರುವಾಗಲಿದ್ದು, ನಾನು ಜುಲೈನಲ್ಲಿ ಚಿತ್ರತಂಡ ಸೇರಿಕೊಳ್ಳಲಿದ್ದೇನೆ’ ಎನ್ನುತ್ತಾರೆ ನೀನಾಸಂ ಸತೀಶ್.

‘ಮೊದಲ ಬಾರಿಗೆ ಇನ್‌ಸ್ಪೆಕ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಬಹಳ ಒಳ್ಳೆಯ ಪಾತ್ರ ಇದು. ಚಿತ್ರವು ಎರಡು ಕಾಲಘಟ್ಟದಲ್ಲಿ ನಡೆಯಲಿದೆ’ ಎಂದರು ಕಾವ್ಯ ಶೆಟ್ಟಿ.

‘ನನಗೆ ಈ ಕಥೆ ಬಹಳ ವಿಶೇಷ. ಮೈಸೂರು ಸೀಮೆಯಲ್ಲಿ 70ರ ದಶಕದಲ್ಲಿ ನಡೆದ ಒಂದು ಘಟನೆ ಬಗ್ಗೆ ಕೇಳಿದ್ದೆ. ಅದು ಎಲ್ಲೂ ದಾಖಲಾಗಿಲ್ಲ. ಎಲ್ಲೂ ಅದರ ಬಗ್ಗೆ ಉಲ್ಲೇಖವಿಲ್ಲ. ಕೊನೆಗೆ ಆ ಕಥೆಯ ವಿವರಗಳನ್ನು ಹುಡುಕಿಕೊಂಡು ಹೋದಾಗ ಹಲವು ಮಹತ್ವದ ವಿಷಯಗಳು ಗೊತ್ತಾದವು. ಇದು ಕನ್ನಡ ನೆಲದ ವೀರರ ಕಥೆ. ಯುದ್ಧ ಎಂದರೆ ಯುದ್ಧಭೂಮಿ ಅಥವಾ ಸಾಮ್ರಾಜ್ಯ ವಿಸ್ತರಣೆಯ ಕಥೆಯಲ್ಲ. ಎರಡು ಸಮುದಾಯಗಳ ಕುರಿತ ಕಥೆ ಇದೆ. ವ್ಯಾಪಾರಿಗಳು ಮತ್ತು ಕಾರ್ಮಿಕರ ನಡುವಿನ ಕಥೆ ಇದೆ. ಇದರಲ್ಲಿ ಭಾಗವಹಿಸಿದ ಕೆಲವರನ್ನು ಹುಡುಕಿ ಮಾತಾಡಿಸಿದೆ. ಒಂದಿಷ್ಟು ಮಾಹಿತಿ ಸಿಕ್ಕಿತು. ಅದನ್ನು ಬೆಳೆಸಿ ಚಿತ್ರಕಥೆ ಮಾಡಿದ್ದೇನೆ. ಈ ಕಥೆ ಎಲ್ಲರಿಗೂ ಇಷ್ಟವಾಗಿದೆ’ ಎಂದರು ಕಥೆಗಾರ ಟಿ.ಕೆ.ದಯಾನಂದ್.

ವೃದ್ಧಿ ಕ್ರಿಯೇಷನ್ಸ್ ಹಾಗೂ ಸತೀಶ್ ಪಿಕ್ಚರ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT