ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಕೈ ಹಿಡಿದು ಕಾಣಿಸಿಕೊಂಡ ವಸಿಷ್ಟ ಸಿಂಹ–ಹರಿಪ್ರಿಯಾ, ಶೀಘ್ರವೇ ಮದುವೆ?

Last Updated 1 ಡಿಸೆಂಬರ್ 2022, 11:44 IST
ಅಕ್ಷರ ಗಾತ್ರ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಟ ಸಿಂಹ ಜೋಡಿ ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಕೈಕೈ ಹಿಡಿದು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಈ ಜೋಡಿ ಶೀಘ್ರವೇ ಹಸೆಮಣೆ ಏರಲಿದೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿವೆ. ಇದರ ಬೆನ್ನಲ್ಲೆ ಜೋಡಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೊ ಮತ್ತು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಫೋಟೊಗಳನ್ನು ಮೆಚ್ಚಿಕೊಂಡಿರುವಅಭಿಮಾನಿಗಳು ನವ ಜೋಡಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.

ಇಬ್ಬರು ಪ್ರೀತಿಯಲ್ಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಅವರು ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿಲ್ಲ.

ಡಿಸೆಂಬರ್‌ನಲ್ಲಿ ಈ ಜೋಡಿಯ ನಿಶ್ಚಿತಾರ್ಥ ನಡೆಯಲಿದೆ ಎಂದೂ ಸುದ್ದಿ ಹರಿದಾಡುತ್ತಿದೆ. ಅದಕ್ಕಾಗಿ ಈ ಜೋಡಿ ದುಬೈಗೆ ಶಾಪಿಂಗ್‌ಗೆ ತೆರಳಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT