ಸ್ಯಾಂಡಲ್‌ವುಡ್‌ನ ಜನಪ್ರಿಯ ದಂಪತಿ ತರುಣ್ ಸುಧೀರ್ ಹಾಗೂ ಸೋನಲ್ ಮಂಥೆರೋ ಮನೆಯಲ್ಲಿ ಸಂಕ್ರಾಂತಿ ಸಡಗರ ಜೋರಾಗಿತ್ತು. ಸಾಮಾಜಿಕ ಮಾಧ್ಯಮದಲ್ಲಿ ಸಂಕ್ರಾಂತಿ ಹಬ್ಬಕ್ಕೆ ಸೋನಲ್ ಅವರು ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ADVERTISEMENT
ನಟ - ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಬಿಡದಿಯ ತೋಟದಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ.
ಚಿತ್ರ: ಎಕ್ಸ್ ಖಾತೆ
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಮನೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕುಟುಂಬಸ್ಥರು ಒಟ್ಟಾಗಿ ಸೇರಿದ್ದರು. ಈ ಚಿತ್ರಗಳನ್ನು ಪ್ರಿಯಾಂಕಾ ಉಪೇಂದ್ರ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಕನ್ನಡ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಟಿ ಪ್ರಣೀತಾ ಸುಭಾಷ್ ಅವರ ನಿವಾಸದಲ್ಲೂ ಸಂಕ್ರಾಂತಿ ಸಂಭ್ರಮ ಜೋರಾಗಿತ್ತು.
ಚಿತ್ರ: ಇನ್‌ಸ್ಟಾಗ್ರಾಂ
ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕುಟುಂಬಸ್ಥರು ಒಟ್ಟಾಗಿ ಮಕರ ಸಂಕ್ರಾಂತಿ ಹಬ್ಬವನ್ನು ಬಲು ಸಡಗರದಿಂದ ಆಚರಿಸಿದ್ದಾರೆ. ರಜನಿಕಾಂತ್ ನಟನೆಯಲ್ಲಿ ಮೂಡಿಬರುತ್ತಿರುವ ಜೈಲರ್ 2 ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ವಿಜಯ್ ಸೇತುಪತಿ ಕಾಣಿಸಿಕೊಳ್ಳುತ್ತಿದ್ದಾರೆ.