ಭಾನುವಾರ, ಮೇ 22, 2022
27 °C

ಭಾವನೆಗಳ ‘ಭಾವಚಿತ್ರ’; ಚಿತ್ರೀಕರಣ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಯಾನ’ ಖ್ಯಾತಿಯ ನಟ ಚಕ್ರವರ್ತಿ ಹಾಗೂ ‘ಮಗಳು ಜಾನಕಿ’ ಖ್ಯಾತಿಯ ಗಾನವಿ ಲಕ್ಷ್ಮಣ್ ನಟಿಸಿರುವ ‘ಭಾವಚಿತ್ರ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. 

ಗಿರೀಶ್ ಕುಮಾರ್ ಬಿ. ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ 55 ದಿನಗಳ ಕಾಲ ಬೆಂಗಳೂರು, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಮುಂತಾದ ಕಡೆ ನಡೆದಿದೆ. ಈ ಹಿಂದೆ ‘ಆವಾಹಯಾಮಿ’ ಚಿತ್ರ ನಿರ್ದೇಶಿಸಿದ್ದ ಗಿರೀಶ್ ಕುಮಾರ್ ಅವರ ನಿರ್ದೇಶನದ ಎರಡನೇ ಚಿತ್ರವಿದು‌. ಗಿರೀಶ್ ಕುಮಾರ್, ಗಿರೀಶ್ ಬಿಜ್ಜಳ ಸೇರಿ ಚಿತ್ರಕಥೆ ರಚಿಸಿದ್ದಾರೆ.

‘ಮೊಬೈಲ್ ಬಂದಾಗಿನಿಂದ ಎಲ್ಲರಿಗೂ ‘ಭಾವಚಿತ್ರ’ದ ಮೇಲೆ ಹೆಚ್ಚಿನ ಒಲವು. ಕ್ಯಾಮೆರಾ ಹಾಗೂ ಭಾವಚಿತ್ರದ ಮೇಲೆ ನಮ್ಮ ಚಿತ್ರದ ಕಥೆ ಸಾಗುತ್ತದೆ. ಇದನ್ನು ಟೆಕ್ನೋ ಥ್ರಿಲ್ಲರ್ ಅಂತಲೂ ಕರೆಯಬಹುದು. ಇದಷ್ಟೇ ಅಲ್ಲ. ಪ್ರೀತಿ ಹಾಗೂ ಭಾವನಾತ್ಮಕ ಸನ್ನಿವೇಶಗಳು ನಮ್ಮ ಚಿತ್ರದಲ್ಲಿದೆ’ ಎನ್ನುತ್ತಾರೆ ನಿರ್ದೇಶಕ ಗಿರೀಶ್ ಕುಮಾರ್.

ವುಡ್‌ ಕ್ರೀಪರ್ಸ್‌ ಸಂಸ್ಥೆ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಶಿವು ಬೇರಗಿ ಹಾಗೂ ವಿಶ್ವಜಿತ್ ರಾವ್ ಬರೆದಿರುವ ಹಾಡುಗಳಿಗೆ ಗೌತಮ್ ಶ್ರೀವತ್ಸ ಸಂಗೀತ ನೀಡಿದ್ದಾರೆ. ಅಜೇಯ್ ಕುಮಾರ್ ಛಾಯಾಗ್ರಹಣ ಹಾಗೂ ರತೀಶ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ. ಅವಿನಾಶ್, ಕಾರ್ತಿಕ್ ಸುಂದರಂ, ಗಿರೀಶ್ ಬಿಜ್ಜಳ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು