‘ಡಾ.ಅಭಿ 007’ ಚಿತ್ರದ ಪೋಸ್ಟರ್ನ್ನು ದ್ರುವ ಸರ್ಜಾ ಬಿಡುಗಡೆ ಮಾಡಿ ನಾಯಕ ವಿಷ್ಣು ಅವರಿಗೆ ಶುಭ ಹಾರೈಸಿದ್ದಾರೆ.ವಿಷ್ಣು ಅವರು ಈ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗಿ ಸಿನಿಮಾ ಕ್ಷೇತ್ರ ಪ್ರವೇಶಿಸಿದ್ದಾರೆ. ಈ ಹಿಂದೆ ಛಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ‘ಜಗ್ಗುದಾದಾ’ ಚಿತ್ರದಲ್ಲಿ ವಿಷ್ಣು ಅಭಿನಯಿಸಿದ್ದರು.

ಮೂಲತಃ ವೈದ್ಯರಾಗಿರುವ ಡಾ.ವೆಂಕಟೇಶ್ ಪ್ರಸಾದ್ ಈ ಚಿತ್ರದ ನಿರ್ದೇಶಕರು. ಹಿಂದಿ ಹಾಗೂ ಇಂಗ್ಲಿಷ್ನ ಕೆಲವು ವೆಬ್ ಸೀರಿಸ್ ಹಾಗೂ ಧಾರಾವಾಹಿಗಳಿಗೆ ಸಹಾಯಕ ನಿರ್ದೇಶನ ಮಾಡಿರುವ ಅನುಭವ ಇವರಿಗಿದೆ. ಹಿರಿತೆರೆಯಲ್ಲಿ ವೆಂಕಟೇಶ್ ಪ್ರಸಾದ್ ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮೂರು ಹಾಡುಗಳಿದ್ದು, ಯು.ವಿ.ಸ್ಟೆವೆನ್ ಸತೀಶ್ ಸಂಗೀತ ನೀಡುತ್ತಿದ್ದಾರೆ. ಚೇತನ್ ಕುಮಾರ್ (ಭರ್ಜರಿ) ಗೀತರಚನೆ ಮಾಡಿದ್ದಾರೆ.

ಇನ್ಫೆಂಟ್ ಭರತ್ ಛಾಯಾಗ್ರಹಣ, ಅರುಣ್ ರೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಮೂರು ಸಾಹಸ ಸನ್ನಿವೇಶಗಳಿದ್ದು, ಅರ್ಜುನ್ ರಾಜ್, ಚಂದ್ರು ಬಂಡೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.
ವಿಷ್ಣು ನಾಯಕನಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ವರ್ಧನ್, ಅದ್ವಿತಿ ಶೆಟ್ಟಿ, ಪ್ರಿಯಾಂಕ ಅರೋರ, ವೀಣಾ ಸುಂದರ್, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡ್, ನಾಗೇಂದ್ರ ಅರಸ್, ಬಲ ರಾಜವಾಡಿ, ಐಶ್ವರ್ಯ, ಶರ್ಮಿಳಾ, ಸುಚಿತ್, ಕುರಿ ರಂಗ, ಡಾ.ಸುಮಿತ್ ತಲ್ವಾರ್ ಇದ್ದಾರೆ.
ಈಗಾಗಲೇ 35 ದಿನಗಳ ಕಾಲ ಬೆಂಗಳೂರು, ತುಮಕೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಇನ್ನೂ 15ದಿನಗಳ ಚಿತ್ರೀಕರಣ ಬಾಕಿಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.