ಬುಧವಾರ, ಜೂನ್ 16, 2021
27 °C

ಕೊರೊನಾ ಕಾರಣದಿಂದ ಚಿತ್ರರಂಗ ಸ್ತಬ್ಧ; ಗಾರೆ ಕೆಲಸದಲ್ಲಿ ತೊಡಗಿಕೊಂಡ ಚಿಕ್ಕಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂದನವನದ ಹಾಸ್ಯ ನಟ ಚಿಕ್ಕಣ್ಣ ಅವರು ಜನತಾ ಕರ್ಫ್ಯೂ ಅವಧಿಯಲ್ಲಿ ತಮ್ಮ ತೋಟದ ಮನೆಯಲ್ಲಿ ಗಾರೆ ಕೆಲಸದಲ್ಲಿ ತೊಡಗಿದ್ದಾರೆ.

ಕೊರೊನಾ ಸೋಂಕಿನ ಕಾರಣಕ್ಕೆ ಚಿತ್ರರಂಗದ ಚಟುವಟಿಕೆಗಳೆಲ್ಲಾ ಸ್ತಬ್ಧವಾಗಿವೆ. ಈಗ ಚಿಕ್ಕಣ್ಣ ತಮ್ಮ ತೋಟದ ಮನೆಯಲ್ಲಿ ಗಾರೆ ಕೆಲಸದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲ. ಕೋವಿಡ್‌ ಸೋಂಕಿಗೆ ಒಳಗಾಗಿ ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿರುವವರಿಗೆ ಆಹಾರ, ಔಷಧ ಪೂರೈಕೆಗೆ ನೆರವಾಗುತ್ತಿದ್ದಾರೆ.

ಚಿತ್ರರಂಗಕ್ಕೆ ಬರುವ ಮೊದಲು ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿದ್ದರು. ಈಗ ಕನ್ನಡದ ಬಹುಬೇಡಿಕೆಯ ಹಾಸ್ಯನಟ. ಕರ್ಫ್ಯೂ ಕಾರಣಕ್ಕೆ ಚಿಕ್ಕಣ್ಣ ತಮ್ಮ ತೋಟದ ಮನೆ ಸೇರಿದ್ದಾರೆ. ಅಲ್ಲಿ ಕಟ್ಟುತ್ತಿರುವ ಶೌಚಾಲಯದ ಗಾರೆ ಕೆಲಸವನ್ನು ಮಾಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು