ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Anna From Mexico: ಮೆಕ್ಸಿಕೋಗೆ ಹೊರಟ ಡಾಲಿ!

Published 18 ಡಿಸೆಂಬರ್ 2023, 23:30 IST
Last Updated 18 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

‘ಬಡವ ರಾಸ್ಕಲ್‌’ ಬಳಗ ಮತ್ತೊಮ್ಮೆ ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ನಿರ್ದೇಶಕ ಶಂಕರ್‌ ಗುರು ನಿರ್ದೇಶಿಸಲಿರುವ ಹೊಸ ಸಿನಿಮಾ ‘ಅಣ್ಣ from Mexico’ ಸೆಟ್ಟೇರಿದ್ದು, ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. 

ಈ ಹಿಂದೆ ನಟ ‘ಡಾಲಿ’ ಧನಂಜಯ ಅವರ ಜನ್ಮದಿನದಂದು ಚಿತ್ರದ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಿದ್ದ ಚಿತ್ರತಂಡವು, ಈಗ ಸದ್ದಿಲ್ಲದೇ ಮುಹೂರ್ತ ಮುಗಿಸಿ ಶೂಟಿಂಗ್ ಅಖಾಡಕ್ಕೆ ಹೆಜ್ಜೆ ಇಡಲು ಸನ್ನದ್ಧವಾಗಿದೆ. ಇತ್ತೀಚೆಗೆ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆಯಿತು. 2021ರಲ್ಲಿ ತೆರೆಗೆ ಬಂದ ‘ಬಡವ ರಾಸ್ಕಲ್’ ಚಿತ್ರದ ಮೂಲಕ ಧನಂಜಯ ಸಿನಿಮಾ ನಿರ್ಮಾಣ ಕ್ಷೇತ್ರಕ್ಕೂ ಕಾಲಿಟ್ಟಿದ್ದರು. ಡಾಲಿ ಪಿಕ್ಚರ್ಸ್‌ನಡಿ ನಿರ್ಮಾಣವಾಗಿದ್ದ ಈ ಸಿನಿಮಾವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಚಿತ್ರವು ಚಂದನವನದಲ್ಲಿ ಕೊಂಚ ಸದ್ದು ಮಾಡಿತ್ತು. ಇದೀಗ ಮತ್ತೊಮ್ಮೆ ಡಾಲಿ ಜೊತೆ ಶಂಕರ್‌ ಜೊತೆಯಾಗಿದ್ದಾರೆ. ಪಕ್ಕ ಆ್ಯಕ್ಷನ್ ಫ್ಯಾಮಿಲಿ ಎಂಟರ್‌ಟೈನರ್ ಚಿತ್ರ ಇದಾಗಿದೆ ಎಂದಿದೆ ಚಿತ್ರತಂಡ. ದಿ ರಾಯಲ ಸ್ಟುಡಿಯೋಸ್ ಅಡಿಯಲ್ಲಿ ಸತ್ಯ ರಾಯಲ ಈ ಚಿತ್ರವನ್ನು ನಿರ್ಮಿಸುತ್ತಿದ್ದು. ಐರಾ ಫಿಲ್ಮ್ಸ್ ಕೂಡ ಕೈಜೋಡಿಸಿದೆ. ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನಿರ್ದೇಶನವಿದ್ದು, ಜನವರಿ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ನಿರ್ಧರಿಸಿದೆ. 

ತೆಲುಗಿನ ‘ಪುಷ್ಪ–2’ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿರುವ ಧನಂಜಯ, ಸದ್ಯ ‘ಉತ್ತರಕಾಂಡ’ ಸಿನಿಮಾದ ಜೊತೆಗೆ ಈ ಸಿನಿಮಾದ ಚಿತ್ರೀಕರಣದಲ್ಲೂ ತೊಡಗಿಸಿಕೊಳ್ಳಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT