ರಾಘು ಶಿವಮೊಗ್ಗ ನಿರ್ದೇಶನದ ‘ದಿ ಟಾಸ್ಕ್’ ಸಿನಿಮಾ ನ.21ರಂದು ತೆರೆಕಾಣುತ್ತಿದ್ದು, ಇತ್ತೀಚೆಗೆ ನಟ ಧ್ರುವ ಸರ್ಜಾ ಸಿನಿಮಾದ ಹಾಡೊಂದನ್ನು ರಿಲೀಸ್ ಮಾಡಿದರು.

‘ಸಾಗುವ ದಾರಿಯ ತುಂಬಾ..’ ಹಾಡು ಸೆಮಿರ್ಯಾಪ್ ಶೈಲಿಯಲ್ಲಿದ್ದು, ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಹಾಡಿಗಿದೆ. ರಾಘು ಶಿವಮೊಗ್ಗ ಹಾಗೂ ಚೇತನ್ ನಾಯ್ಕ್ ದನಿಯಾಗಿರುವ ಈ ಹಾಡಿಗೆ ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ.

ಲೋಕಪೂಜ್ಯ ಪಿಕ್ಚರ್ ಹೌಸ್ ಸಂಸ್ಥೆಯಡಿ ವಿಜಯ್ ಕುಮಾರ್ ಹಾಗೂ ರಾಮಣ್ಣ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ಈ ಸಿನಿಮಾ ಮೂಲಕ ಇಬ್ಬರು ಹೊಸ ನಾಯಕರು ಚಿತ್ರರಂಗಕ್ಕೆ ಹೆಜ್ಜೆ ಇಡುತ್ತಿದ್ದಾರೆ. ಟೀಸರ್ ನೋಡಿದರೆ ಇದೊಂದು ಆ್ಯಕ್ಷನ್ ಥ್ರಿಲ್ಲರ್ ಎನಿಸುತ್ತದೆ. ಸಿನಿಮಾ ನೋಡಬೇಕು ಎನ್ನುವ ನಿರೀಕ್ಷೆ ಹುಟ್ಟುವಂತೆ ಚಿತ್ರದ ದೃಶ್ಯಗಳಿವೆ’ ಎಂದರು ಧ್ರುವ ಸರ್ಜಾ.

‘ಚೂರಿಕಟ್ಟೆ’ ಖ್ಯಾತಿಯ ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ‘ಭೀಮ’ ಸಿನಿಮಾ ಖ್ಯಾತಿಯ ಜಯಸೂರ್ಯ ಆರ್.ಅಜಾದ್, ‘ಪೆಂಟಗನ್’ ಸಿನಿಮಾ ಖ್ಯಾತಿಯ ಸಾಗರ್ ರಾಮ್ ಹಾಗೂ ಬಾಲ ನಟಿ ಬೇಬಿ ಶ್ರೀಲಕ್ಷ್ಮಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶನದ ಜೊತೆಗೆ ಒಂದು ಮುಖ್ಯ ಪಾತ್ರವನ್ನು ನಿರ್ವಹಿಸಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರವಿಂದ್ ಕುಪ್ಳಿಕರ್, ಹರಿಣಿ ಶ್ರೀಕಾಂತ್, ಸಂಪತ್ ಎಂ., ಬಾಲಾಜಿ ಮನೋಹರ್, ಬಿ.ಎಂ.ಗಿರಿರಾಜ್ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.