ದಿಗಂತ್ ನಾಯಕನಾಗಿ ನಟಿಸುತ್ತಿರುವ ಹೊಸಚಿತ್ರದ ಶೀರ್ಷಿಕೆ ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಗೋಪಿ ನಿರ್ದೇಶನದ ಚಿತ್ರಕ್ಕೆ ‘ರುದ್ರ ಕಾಲ’ ಎಂದು ಹೆಸರಿಡಲಾಗಿದೆ. ನಟಿ ಸಮಂತಾ ಶೀರ್ಷಿಕೆ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

‘ರುದ್ರ ಕಾಲ’ ಚಿತ್ರದ ಚಿತ್ರೀಕರಣ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ನಡೆಯಲಿದೆ. ಒಂದೇ ಹಂತದ ಚಿತ್ರೀಕರಣ ನಡೆಸಿ ಆದಷ್ಟು ಬೇಗ ತೆರೆಗೆ ತರುವ ಯೋಚನೆ ಇದೆ. ಇದು ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಈ ತಿಂಗಳ ಅಂತ್ಯದೊಳಗೆ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದರು ನಿರ್ದೇಶಕ.

ರಮೇಶ್ ನಾಯ್ಕ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ಚಿತ್ರದ ಕಥೆ ಬಹಳ ಇಷ್ಟವಾಯ್ತು. ಹೀಗಾಗಿ ಒಪ್ಪಿಕೊಂಡೆ. ನಟಿ ಸಮಂತಾ ಶೀರ್ಷಿಕೆ ಅನಾವರಣ ಮಾಡಿರುವುದು ಚಿತ್ರಕ್ಕೆ ಮತ್ತಷ್ಟು ಬಲ ನೀಡಿದೆ. ಎಲ್ಲರಿಗೂ ಇಷ್ಟವಾಗುವ ಚಿತ್ರ ಇದಾಗಲಿದೆ ಎಂಬ ಭರವಸೆಯಿದೆ’ ಎಂದಿದ್ದಾರೆ ದಿಗಂತ್.

ರಮೇಶ್ ಅವರು ಕಥೆ ಬರೆದಿರುವ ಈ ಚಿತ್ರಕ್ಕೆ ಕ್ರಿಸ್ಟೋಫರ್ ಜೋಸೆಫ್ ಛಾಯಾಗ್ರಹಣವಿದೆ. ಉಳಿದ ತಂತ್ರಜ್ಞರ ಮಾಹಿತಿಯನ್ನು ಶೀಘ್ರದಲ್ಲಿಯೇ ನೀಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-51-1958669991

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.