ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಖತ್‌ ಆಗಿದೆ ‘ಸಖತ್‌’ ಟೈಟಲ್‌ ಟ್ರ್ಯಾಕ್‌

Last Updated 14 ನವೆಂಬರ್ 2021, 7:41 IST
ಅಕ್ಷರ ಗಾತ್ರ

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ, ಸಿಂಪಲ್‌ ಸುನಿ ನಿರ್ದೇಶನದ ‘ಸಖತ್‌’ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಿಡುಗಡೆಯಾಗಿದ್ದು, ರ್‍ಯಾಪ್‌ ಹಾಡಿಗೆ ಗಣೇಶ್‌ ಹೆಜ್ಜೆ ಹಾಕಿದ್ದಾರೆ.

ರೊಮ್ಯಾಂಟಿಕ್ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥಾಹಂದರವನ್ನು ಹೊಂದಿರುವ ಈ ಚಿತ್ರವು ಇದೇ 26ಕ್ಕೆ ಬಿಡುಗಡೆಯಾಗುತ್ತಿದೆ. ಅಂಧನ‌ ಪಾತ್ರದಲ್ಲಿ ಗಣೇಶ್‌ ಲುಕ್.. ಸಿಂಪಲ್ ಸುನಿ ಡೈಲಾಗ್ ಕಿಕ್.. ಜೂಡಾ ಸ್ಯಾಂಡಿ ಸಂಗೀತ ಎಲ್ಲವೂ ಚಿತ್ರಪ್ರೇಮಿಗಳನ್ನು ಸೆಳೆದಿದೆ. ಇದೀಗ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಿಡುಗಡೆಯಾಗಿದ್ದು, ಕುಂತಲ್ಲೇ ಹೆಜ್ಜೆ ಹಾಕುವಂತ ರ್‍ಯಾಪ್‌ ಬರೆದಿದ್ದಾರೆ ನಿರ್ದೇಶನದ ಹೊಣೆ ಹೊತ್ತಿರೋ ಸಿಂಪಲ್ ಸುನಿ. ಅವರ ಜೊತೆಗೆ ರ್‍ಯಾಪರ್‌ ಸಿದ್ ಅವರ ಸಾಹಿತ್ಯವೂ ಹದವಾಗಿ ಬೆರೆತಿದೆ. ಪಂಚಮ್ ಜೀವಾ, ಜೂಡಾ ಸ್ಯಾಂಡಿ, ರ್‍ಯಾಪರ್‌ ಸಿದ್ ಹಾಡಿಗೆ ಧ್ವನಿಯಾಗಿದ್ದಾರೆ. ಅದ್ಧೂರಿ ಸೆಟ್‌ನಲ್ಲಿ 25 ಡ್ಯಾನ್ಸರ್‌ಗಳ ನಡುವೆ ಗಣೇಶ್‌ ಹೆಜ್ಜೆ ಹಾಕಿದ್ದಾರೆ.

ಟಿ.ವಿ. ರಿಯಾಲಿಟಿ ಶೋ ಹಾಗೂ ಕೋರ್ಟ್ ಕೇಸ್ ಸುತ್ತ ಈ ಸಿನಿಮಾ ಕಥೆ ಹೆಣೆಯಲಾಗಿದೆ. ಗಣೇಶ್‌ ರಿಯಾಲಿಟಿ ಶೋ ಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನಟಿ ನಿಶ್ವಿಕಾ ನಾಯ್ಡು ಹಾಗೂ ಸುರಭಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಧರ್ಮಣ್ಣ ಕಡೂರು ಸೇರಿದಂತೆ ಮುಂತಾದವರು ತಾರಾಗಣದಲ್ಲಿದ್ದಾರೆ. ಕೆವಿಎನ್ ಪ್ರೊಡಕ್ಷನ್‌ನಡಿ ತಯಾರಾಗಿರುವ ಈ ಚಿತ್ರಕ್ಕೆ ನಿಶಾ ವೆಂಕಟ್ ಕೋನಾಂಕಿ ಹಾಗೂ ಸುಪ್ರಿತ್ ಬಂಡವಾಳ ಹೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT