ವರ್ಷದ ಅಂತ್ಯದಲ್ಲಿ ತೆರೆಕಂಡ ‘ಯುಐ’ ಹಾಗೂ ‘ಮ್ಯಾಕ್ಸ್’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈ ವಾರ ಹೊಸ ಚಿತ್ರಗಳ ಸಂಖ್ಯೆ ಕಡಿಮೆಯಾಗಿದೆ.

ಗನ್ಸ್ ಅಂಡ್ ರೋಸಸ್’...

ಯುವನಟ ಅರ್ಜುನ್ ನಾಯಕನಾಗಿ ನಟಿಸಿರುವ ‘ಗನ್ಸ್ ಅಂಡ್ ರೋಸಸ್’ ಚಿತ್ರ ಇಂದು(ಜ.3) ಬಿಡುಗಡೆಯಾಗುತ್ತಿದೆ. ಹೆಚ್.ಆರ್.ನಟರಾಜ್ ಅವರು ದ್ರೋಣ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಶ್ರೀನಿವಾಸ್ ಕುಮಾರ್ ನಿರ್ದೇಶಿಸಿದ್ದಾರೆ.

‘ಇಪ್ಪತ್ತೈದು ವರ್ಷಗಳಿಂದ ಸಾಕಷ್ಟು ಚಿತ್ರಗಳಿಗೆ ಸಹ ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದೇನೆ. ಇದು ಮೊದಲ ನಿರ್ದೇಶನದ ಚಿತ್ರ. ಯಶ್ವಿಕ ನಿಷ್ಕಲ ಈ ಚಿತ್ರದ ನಾಯಕಿ. ಕಿಶೋರ್, ಅವಿನಾಶ್, ಶೋಭರಾಜ್, ನೀನಾಸಂ ಅಶ್ವಥ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶಶಿಕುಮಾರ್ ಸಂಗೀತ ನೀಡಿದ್ದಾರೆ. ಜನಾರ್ದನ್ ಬಾಬು ಛಾಯಾಚಿತ್ರಗ್ರಹಣ, ಸಂಜೀವ್ ರೆಡ್ಡಿ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ’ ಎಂದಿದ್ದಾರೆ ನಿರ್ದೇಶಕರು.

‘ಭೂಗತ ಜಗತ್ತಿನಲ್ಲಿ ನಡೆಯುವ ಪ್ರೇಮಕಥೆ. ಹಾಗಾಗಿ ಚಿತ್ರಕ್ಕೆ ‘ಗನ್ಸ್ ಅಂಡ್ ರೋಸಸ್’ ಎಂದು ಹೆಸರಿಡಲಾಗಿದೆ. ನಮ್ಮ ಸುತ್ತಮುತ್ತ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ಮುಂತಾದ ವಿಷಯಗಳನ್ನಿಟ್ಟುಕೊಂಡು ಕಥೆ ಸಿದ್ಧಗೊಂಡಿದೆ’ ಎಂದಿದೆ ಚಿತ್ರತಂಡ.

ಸ್ವೇಚ್ಛಾ...

ಯುವನಟರಾದ ಅನ್ವಿಶ್ ಹಾಗೂ ಪವಿತ್ರಾ ಜೋಡಿಯಾಗಿ ನಟಿಸಿರುವ ‘ಸ್ವೇಚ್ಛಾ’ ಚಿತ್ರಕ್ಕೆ ಸುರೇಶ್ ರಾಜು ನಿರ್ದೇಶನವಿದೆ.

‘ಎರಡು ಕಥೆಗಳನ್ನು ಪ್ಯಾರಲಲ್ ಆಗಿ ಹೇಳಲು ಪ್ರಯತ್ನಿಸಿದ್ದು, ಐದು ಪಾತ್ರಗಳು, ಅವರವರ ಸ್ವೇಚ್ಚೆಗೋಸ್ಕರ ಯಾವ ರೀತಿ ಹೋರಾಟ ನಡೆಸುತ್ತವೆ ಎಂಬುದನ್ನು ಈ ಚಿತ್ರದ ಮೂಲಕ ಹೇಳಲು ಪ್ರಯತ್ನಿಸಿರುವೆ. ನವರಸಗಳನ್ನೂ ಒಳಗೊಂಡ ಪ್ರೇಮಕಥೆಯಾಗಿದ್ದು, 90ರ ದಶಕದ ಹಾಗೂ ಈಗಿನ ಕಾಲಘಟ್ಟದ ಕಥೆಗಳನ್ನು ಪ್ಯಾರಲಲ್ ಆಗಿ ಹೇಳುತ್ತಾ ಸಾಗುತ್ತದೆ. ಕೂಲಿ ಕೆಲಸ ಮಾಡುವ ಹುಡುಗನೊಬ್ಬನ ಪ್ರೀತಿ ಎಷ್ಟರಮಟ್ಟಿಗೆ ಗಾಢವಾಗಿರುತ್ತದೆ, ಮುಂದೆ ಅದು ಯಾವೆಲ್ಲ ಆಯಾಮಗಳನ್ನು ಪಡೆದುಕೊಳ್ಳುತ್ತದೆ ಎಂದು ಒಂದು ಕಥೆಯಲ್ಲಿ ಹೇಳಲು ಪ್ರಯತ್ನಿಸಿದರೆ, ಮತ್ತೊಂದರಲ್ಲಿ ತಾಯಿ ಮಗಳ ಬಾಂಧವ್ಯದ ಕಥೆಯನ್ನು ಹೇಳಿದ್ದೇವೆ’ ಎನ್ನುತ್ತಾರೆ ನಿರ್ದೇಶಕರು.

ಸ್ಟಾರ್ ಮಸ್ತಾನ್ ಹಾಗೂ ಕೆ.ಆರ್. ಮುರಹರಿ ರೆಡ್ಡಿ ಬಂಡವಾಳ ಹೂಡಿದ್ದಾರೆ. ಚಿತ್ರದ ಐದು ಹಾಡುಗಳಿಗೆ ಲೋಕಿ ತವಸ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ರಾಯಚೂರು, ಬೂರ್ದಿಪಾಡು, ಶ್ರೀರಂಗಪಟ್ಟಣ ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣಗೊಂಡಿದೆ. ಎಸ್.ಸತೀಶ್ ಛಾಯಾಚಿತ್ರಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.