ನಿರ್ದೇಶಕ ಜೋಗಿ ಪ್ರೇಮ್ ಚಿತ್ರರಂಗದಲ್ಲಿ ಹೊಸಬರಿಗೆ ಬೆನ್ನೆಲುಬಾಗಿ ನಿಲ್ಲುವ ಉದ್ದೇಶದಿಂದ ಕೆಲ ದಿನಗಳ ಹಿಂದೆ ‘ಫೀನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್’ ಆರಂಭಿಸಿದ್ದರು. ಈ ಸಂಸ್ಥೆಯ ಮೊದಲ ಸಿನಿಮಾ ಶೀರ್ಷಿಕೆ ಅನಾವರಣಗೊಂಡಿದ್ದು, ‘ಇಡಿಯಟ್’ ಆಗಿ ರಾಣಾ ಕಾಣಿಸಿಕೊಳ್ಳಲಿದ್ದಾರೆ.

ಪ್ರೇಮ್ ಅವರ ಗರಡಿಯಲ್ಲಿ ಪಳಗಿರುವ ಮಂಜುನಾಥ್ ಬಿ.ಎಸ್. ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ‘ನಾನು ಪ್ರೇಮ್ ಅವರ ಜತೆಯಲ್ಲಿ ಹಲವು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ಹೀಗಾಗಿ ಪ್ರೇಮ್ ಹಾಗೂ ರಕ್ಷಿತಾ ಅವರ ನಿರ್ಮಾಣ ಸಂಸ್ಥೆಯ ಮೊದಲ ಸಿನಿಮಾವನ್ನು ನನಗೆ ನೀಡಿದ್ದಾರೆ. ನಿರ್ದೇಶಕನಾಗಿ ನನಗೆ ಇದು ಮೊದಲ ಸಿನಿಮಾ. ಇದೊಂದು ಕಾಮಿಡಿ, ಆ್ಯಕ್ಷನ್ ಜಾನರ್ನಲ್ಲಿದೆ. ರಾಣಾಗೆ ಅತ್ಯಂತ ಸೂಕ್ತವಾಗುವ ಕಥೆ. ಶೀಘ್ರದಲ್ಲಿಯೇ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದರು ನಿರ್ದೇಶಕ.

ವಿಲಿಯಂ ಡೇವಿಡ್ ಛಾಯಾಚಿತ್ರಗ್ರಹಣ, ರೋಮಿಯೋ ಸಂಗೀತ ಚಿತ್ರಕ್ಕೆ ಇರಲಿದೆ.v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-51-1150335974

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.