ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ ‘ಕಡಲೂರ ಕಣ್ಮಣಿ’ ಚಿತ್ರಕ್ಕಾಗಿ ಮಧುರಾಮ್ ಅವರು ಬರೆದಿರುವ ‘ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ’ ಎಂಬ ಹಾಡು ಇತ್ತೀಚೆಗೆ ಎ2 ಮ್ಯೂಸಿಕ್ ಚಾನೆಲ್ ಮೂಲಕ ಬಿಡುಗಡೆಯಾಯಿತು.

ನನಗೆ ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು ಇದೆ.

ಚಿತ್ರ ಆರಂಭವಾದದ್ದು ಹೀಗೆ..

ನಿರ್ದೇಶಕ ರಾಮ್ ಪ್ರಸನ್ನ ಅವರು ಚಿತ್ರ ಆರಂಭವಾದ ಬಗೆಯನ್ನು ಹೀಗೆ ಹೇಳಿದರು.

‘ಜೀವನದಲ್ಲಿ ನೊಂದ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಸಮುದ್ರದ ಬಳಿ ಹೋಗುತ್ತಿದೆ. ಇನ್ನೇನು ಆತ್ಮಹತ್ಯೆ ಮಾಡಿಕೊಳ್ಳಬೇಕು ಅನ್ನುವಷ್ಟರಲ್ಲಿ ಹಿಂದೆ ನನ್ನ ತಂದೆ-ತಾಯಿ ಕಂಡರು. ಆಗ ನಾನು ನನ್ನ ನಿರ್ಧಾರದಿಂದ ಹಿಂದೆ ಸರಿದೆ. ಈ ಸಿನಿಮಾದ ನಿರ್ಮಾಪಕರು ನನ್ನ ಸ್ನೇಹಿತರು. ಅವರೆಲ್ಲಾ ನನ್ನ ಪ್ರೋತ್ಸಾಹಕ್ಕೆ ನಿಂತರು. ಈ ಸಿನಿಮಾ ಆರಂಭವಾಯಿತು. ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ’ ಎಂದರು ಅವರು.

‘‘ಕಡಲೂರ ಕಣ್ಮಣಿ’ ಯನ್ನು ನಾನು ವಜ್ರ ಎನ್ನುತ್ತೇನೆ. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಇದರ ಕಥೆ ಈಗಲೇ ಪೂರ್ತಿ ಹೇಳಲಾಗದು. ನಿರ್ಮಾಪಕರ ಒತ್ತಾಯಕ್ಕೆ ಮಣಿದು ನಾನೇ ಸಂಗೀತ ನಿರ್ದೇಶನ ಮಾಡಿದ್ದೇನೆ’ ಎಂದರು ನಿರ್ದೇಶಕರು.

‘ನನಗೆ ನನ್ನ ಸ್ನೇಹಿತನ ಮೂಲಕ ನಿರ್ದೇಶಕರು ಪರಿಚಯವಾದರು. ಸ್ವಲ್ಪ ಸಮಯ ಅವರೊಡನೆ ಮಾತನಾಡಿದೆ. ನೀವೇನಮ್ಮ ಸಿನಿಮಾದ ಹೀರೋ ಎಂದರು. ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ’ ಎಂದರು ನಾಯಕ ಅರ್ಜುನ್.

ನಿರ್ಮಾಪಕರಾದ ವಿನೋದ್ ರಾಮ್ ಹೊಳೆನರಸೀಪುರ, ಕೊಳ ಶೈಲೇಶ್ ಆರ್. ಪೂಜಾರ್, ಸಹ ನಿರ್ಮಾಪಕ ಬಸವರಾಜ ಗಚ್ಚಿ, ಹಾಡು ಬರೆದಿರುವ ಮಧುರಾಮ್, ಕಿರಣ್ ದೇವಲಾಪುರ ಹಾಗೂ ಛಾಯಾಗ್ರಾಹಕರಾದ ಮನೋಹರ್ ಹಾಗೂ ರವಿರಾಮ್ ಚಿತ್ರದ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.