ಭಾನುವಾರ, ಮೇ 29, 2022
31 °C

ಬಿಂದ್ಯಾ ಮೂವೀಸ್‌ನ ಹೊಸ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಂದ್ಯಾ ಮೂವೀಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ. ‘ಲಕಲಕ‌‌ ಲ್ಯಾಂಬರ್ಗಿನಿ’ ಆಲ್ಬಂ ನಿರ್ಮಾಪಕ ಆರ್. ಕೇಶವ ಈ ಚಿತ್ರದ ನಿರ್ಮಾಪಕರು. ಬಿಂದ್ಯಾ‌‌ ಮೂವೀಸ್ ಬ್ಯಾನರ್‌ ಅಡಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಆರ್. ಜಯರಾಂ (ಆರ್ ಜೈ) ಈ ಚಿತ್ರದ ನಿರ್ದೇಶಕ. ಪ್ಯಾನ್ ಇಂಡಿಯಾ ಚಿತ್ರವಾಗಿ ಈ ಚಿತ್ರ ಮೂಡಿಬರಲಿದೆ. 

1970ರ ಕಾಲಘಟ್ಟದಲ್ಲಿ ನಡೆಯುವ ರೆಟ್ರೊ ಶೈಲಿಯ ಕಥೆ ಇದು. ಸದ್ಯದಲ್ಲೇ ತಾಂತ್ರಿಕವರ್ಗ ಹಾಗೂ ತಾರಾಬಳಗದ ಬಗ್ಗೆ ಮಾಹಿತಿ ನೀಡಲಾಗುವುದು. ಮುಂದಿನ ತಿಂಗಳು ಮೋಷನ್ ಪೋಸ್ಟರ್ ಬಿಡುಗಡೆ ಹಾಗೂ ಅದ್ದೂರಿ ಮುಹೂರ್ತ ಸಮಾರಂಭ ನಡೆಯಲಿದೆ ಎಂದು ನಿರ್ದೇಶಕ ಆರ್.ಜೈ. ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು