ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ತೆರೆಗೆ ಬರಲು ಸಜ್ಜಾದ ‘ಚಿಲ್ಲಿ ಚಿಕನ್’

Published 11 ಜೂನ್ 2024, 13:58 IST
Last Updated 11 ಜೂನ್ 2024, 13:58 IST
ಅಕ್ಷರ ಗಾತ್ರ

ಬೆಂಗಳೂರಿನ ಚೈನೀಸ್ ಹೋಟೆಲ್‌ನಲ್ಲಿ ನಡೆಯುವ ಘಟನೆಗಳ ಸುತ್ತ ಸಾಗುವ ‘ಚಿಲ್ಲಿ ಚಿಕನ್’ ಚಿತ್ರದ ಟ್ರೇಲರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಮೆಟನೋಯ್ ಸ್ಟುಡಿಯೋಸ್ ಪ್ರೊಡಕ್ಷನ್ ಅಡಿಯಲ್ಲಿ ದೀಪ್ ಭೀಮಜಿಯಾನಿ ಮತ್ತು ಸುಧಾ ನಂಬಿಯಾರ್ ಅವರು ನಿರ್ಮಿಸಿರುವ ಚಿತ್ರಕ್ಕೆ ಪ್ರತೀಕ್ ಪ್ರಜೋಶ್ ಅವರ ನಿರ್ದೇಶನವಿದೆ.

‘ಬಹುತೇಕ ಹೊಸ ಕಲಾವಿದರಿಂದ ಕೂಡಿದ ಚಿತ್ರ. ಕೆಲಸಕ್ಕೆಂದು ಉತ್ತರ ಭಾರತದಿಂದ ಬಂದ ಐದು ಹುಡುಗರು ಬೆಂಗಳೂರಿನಲ್ಲಿ ಚೈನೀಸ್ ಹೊಟೆಲ್‌ವೊಂದರಲ್ಲಿ ಕೆಲಸ ಮಾಡುತ್ತ, ತಾವೇ ಸ್ವಂತ ಹೋಟೆಲ್ ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ. ಕೊನೆಗೆ ಅದೆಲ್ಲದರಿಂದ ಪಾರಾಗಿ ಗೆಲ್ಲುತ್ತಾರಾ, ಇಲ್ಲವೇ? ಎಂಬುದೇ ಚಿತ್ರದ ಕಥೆ’ ಎಂದರು ನಿರ್ದೇಶಕರು.

‘ನಾನು ಈಗಾಗಲೇ ಹಿಂದಿಯಲ್ಲಿ ಕಿರುಚಿತ್ರಗಳನ್ನು ನಿರ್ಮಿಸಿದ್ದೇನೆ. ಈ ಚಿತ್ರವನ್ನು ಕನ್ನಡದಲ್ಲಿ ಮಾತ್ರ ಮಾಡಿದ್ದೇವೆ. ಶೀಘ್ರದಲ್ಲಿಯೇ ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ಮಾಪಕ ದೀಪ್ ಭೀಮಾಜಿಹಾನಿ. 

ಸಿದ್ದಾಂತ್ ಸುಂದರ್ ಸಂಗೀತ, ಶ್ರೀಶ್ ತೋಮರ್ ಛಾಯಾಚಿತ್ರಗ್ರಹಣ, ಆಶಿಕ್ ಕೆ.ಎಸ್ ಅವರ ಸಂಕಲನ ಚಿತ್ರಕ್ಕಿದೆ. ಬಿ.ವಿ.ಶೃಂಗಾ, ರಿನಿ, ನಿತ್ಯಶ್ರೀ, ಬಿಜೌ ತಾಂಜಿಂ ಮುಂತಾದವರು ತಾರಾಗಣದಲ್ಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT