ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಗಿಣಿ ‘ಇಮೇಲ್’ಗೆ ಪ್ರಜ್ವಲ್ ದೇವರಾಜ್ ಸಾಥ್‌

Published 7 ಜನವರಿ 2024, 13:26 IST
Last Updated 7 ಜನವರಿ 2024, 13:26 IST
ಅಕ್ಷರ ಗಾತ್ರ

ನಟಿ ರಾಗಿಣಿ ದ್ವಿವೇದಿ ಮುಖ್ಯಭೂಮಿಕೆಯಲ್ಲಿರುವ ‘ಇಮೇಲ್‌’ ಚಿತ್ರದ ಫಸ್ಟ್ ಲುಕ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ಪ್ರಜ್ವಲ್ ದೇವರಾಜ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ತಂಡಕ್ಕೆ ಶುಭ ಹಾರೈಸಿದರು.

ಎಸ್ ಆರ್ ರಾಜನ್ ಎಸ್ ಆರ್ ಫಿಲಂ ಫ್ಯಾಕ್ಟರಿ ಮೂಲಕ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ಕನ್ನಡ ಹಾಗೂ ತಮಿಳು ಭಾಷೆಗಳಲ್ಲಿ ಸಿದ್ಧಗೊಂಡಿದೆ. ‘ಮಹಿಳಾ ಪ್ರಧಾನ ಚಿತ್ರವಾಗಿದ್ದು ಇಮೇಲ್‌ ಕುರಿತಾದ ಕಥೆ ಹೊಂದಿದೆ. ಚಿತ್ರೀಕರಣ ಪೂರ್ಣಗೊಂಡಿದ್ದು ಶೀಘ್ರದಲ್ಲಿ ತೆರೆಗೆ ಬರಲಿದೆ. ಎರಡು ಭಾಷೆಗಳಲ್ಲಿ ನಿರ್ಮಾಣಗೊಂಡಿದ್ದರೂ ಕನ್ನಡದ ತಂಡವೇ ಇದೆ’ ಎಂದರು ರಾಗಿಣಿ. 

ಮುರುಗ ಅಶೋಕ್, ಮನೋಬಲ, ‘ಜೈಲರ್’ ಚಿತ್ರದ ಖ್ಯಾತಿಯ ಬಿಲ್ಲಿ, ಮಂಜು ನಂಜನಗೂಡು ಮುಂತಾದವರು ಚಿತ್ರದಲ್ಲಿದ್ದಾರೆ. ಜುಬಿನ್ ಹಾಗೂ ಕಿರಣ್ ತೊಟಂಬೈಲ್ ಸಂಗೀತ ನೀಡಿದ್ದಾರೆ. ಸೆಲ್ವಂ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, ಗೋವಾ ಹಾಗೂ ಮುಂಬೈನಲ್ಲಿ ಚಿತ್ರೀಕರಣ ನಡೆದಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT