ಜನಪ್ರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಒಂದು ಸಣ್ಣ ವಿರಾಮದ ಬಳಿಕ ಮತ್ತೊಂದು ಚಿತ್ರ ಪ್ರಾರಂಭಿಸಿದ್ದಾರೆ. ಭಾಗ್ಯ ಕೆ.ಮೂರ್ತಿ ಅವರ ಸ್ವಾತಂತ್ರ್ಯಪೂರ್ವ ಕಾದಂಬರಿ ಆಧಾರಿತ ಚಿತ್ರಕ್ಕೆ ‘ಶಾನುಭೋಗರ ಮಗಳು’ ಎಂದು ಹೆಸರಿಡಲಾಗಿದೆ. ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
‘ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ. ‘ಶಾನುಭೋಗರ ಮಗಳ’ ಪಾತ್ರ ನಿರ್ವಹಿಸುತ್ತಿರುವ ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೇಚಿಗೆ ಶ್ರೀರಂಗ ಪಟ್ಟಣ, ಮೇಲುಕೋಟೆ, ಕುಂತಿ ಬೆಟ್ಟದ ಸುತ್ತಮುತ್ತ ಚಿತ್ರೀಕರಿಸಲಾಯಿತು’ ಎಂದಿದೆ ಚಿತ್ರತಂಡ.
ಟಿಪ್ಪು ಸುಲ್ತಾನ್ ಪಾತ್ರದಲ್ಲಿ ಕಿಶೋರ್ ಅಭಿನಯಿಸುತ್ತಿದ್ದು, ರಮೇಶ್‍ಭಟ್, ಸುಧಾ ಬೆಳವಾಡಿ, ಪದ್ಮಾ ವಾಸಂತಿ, ವಾಣಿಶ್ರೀ, ಭಾಗ್ಯಶ್ರೀ, ಕುಮಾರಿ ಅನನ್ಯ, ಟಿ.ಎನ್.ಶ್ರೀನಿವಾಸ ಮೂರ್ತಿ, ನಿರಂಜನ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದಾರೆ. ಡಾ.ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ಜೈ ಆನಂದ್ ಛಾಯಾಗ್ರಹಣ, ಕೆಂಪರಾಜ್ ಸಂಕಲನ ಚಿತ್ರಕ್ಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.