ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಣ್ಣ, ಉಪೇಂದ್ರ-ರಾಜ್ ಬಿ ಶೆಟ್ಟಿ ಅಭಿನಯದ ‘45’ ಚಿತ್ರ ವರ್ಷಾಂತ್ಯಕ್ಕೆ ತೆರೆಗೆ?

Published : 29 ಸೆಪ್ಟೆಂಬರ್ 2024, 12:44 IST
Last Updated : 29 ಸೆಪ್ಟೆಂಬರ್ 2024, 12:44 IST
ಫಾಲೋ ಮಾಡಿ
Comments

ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ ‘45’ ಚಿತ್ರೀಕರಣ ಇತ್ತೀಚೆಗಷ್ಟೇ ಪೂರ್ಣಗೊಂಡಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಚಿತ್ರ ಈ ವರ್ಷದ ಅಂತ್ಯಕ್ಕೆ ತೆರೆಗೆ ಬರುವ ನಿರೀಕ್ಷೆಯಿದೆ. 

‘ಈ ಚಿತ್ರದಲ್ಲಿ ನಾವು ಮೂವರು ನಟಿಸಿದ್ದೇವೆ. ಇಲ್ಲಿ ಆ ನಟ ಹೆಚ್ಚು, ಈ ನಟ ಕಡಿಮೆ ಎಂದಿಲ್ಲ. ಎಲ್ಲರೂ ಒಂದೇ. ಎಲ್ಲ ಪಾತ್ರಗಳಿಗೂ ಅದರದ್ದೇ ಆದ ಮಹತ್ವವಿದೆ. ಉಪೇಂದ್ರ ಅವರ ಜೊತೆ ನಟಿಸಲು ನಾನು ಯಾವಾಗಲೂ ಸಿದ್ಧ. ಅರ್ಜುನ್ ಜನ್ಯ ಅವರ ಮೊದಲ ನಿರ್ದೇಶನದ ಚಿತ್ರ ಎಂದು ಸಾಧ್ಯವಿಲ್ಲದಷ್ಟು ಉತ್ತಮವಾಗಿ ಚಿತ್ರ ಮೂಡಿ ಬಂದಿದೆ. ಇಡೀ ಭಾರತೀಯರೆ ಮೆಚ್ಚುವಂತಹ ಆ್ಯಕ್ಷನ್ ಚಿತ್ರವಾಗಲಿದೆ’ ಎಂದರು ಶಿವರಾಜ್‌ಕುಮಾರ್‌.

ರಮೇಶ್ ರೆಡ್ಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ಪೂರ್ತಿ ಚಿತ್ರ ಒಂದು ದೇವಸ್ಥಾನವಿದ್ದಂತೆ. ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಇಲ್ಲಿ ಬ್ರಹ್ಮ, ವಿಷ್ಣು, ಮಹೇಶ್ವರ ಇದ್ದಂತೆ. ರಮೇಶ್ ರೆಡ್ಡಿ ಅವರು ಈ ದೇವಸ್ಥಾನ ಕಟ್ಟಿದವರು. ಛಾಯಾಗ್ರಾಹಕ ಸತ್ಯ ಹೆಗಡೆ ಪ್ರಧಾನ ಪುರೋಹಿತರು. ಎಲ್ಲರ ಸಹಕಾರದಿಂದ 106 ದಿನಗಳ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಮುಂದೆ ಗ್ರಾಫಿಕ್ಸ್‌ ಕೆಲಸ ಪ್ರಾರಂಭವಾಗಲಿದೆ. ಶೀಘ್ರದಲ್ಲಿಯೇ ಮುಂದಿನ ಕೆಲಸ ಮುಗಿಸಿ ತೆರೆಗೆ ಬರುತ್ತೇವೆ’ ಎಂದರು ಅರ್ಜುನ್‌ ಜನ್ಯ. 

‘ಮನುಷ್ಯನ ಸಾವಿನ ನಂತರದ ಹಾಸ್ಯಮಯ ಕಥಾ ಹಂದರವನ್ನು ಈ ಚಿತ್ರ ಹೊಂದಿದ್ದು, ಸ್ವರ್ಗ, ನರಕಗಳ ಗ್ರಾಫಿಕ್ಸ್‌ ಲೋಕವೇ ಚಿತ್ರದಲ್ಲಿದೆ’ ಎಂದಿದೆ ಚಿತ್ರತಂಡ. ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದು ಸಂಗೀತ ಸಂಯೋಜಿಸಿದ್ದಾರೆ. ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆದಿದ್ದು, ಕನ್ನಡವಲ್ಲದೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲೂ ಮೂಡಿಬರುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT