ಆರಂಭದಿಂದಲೂ ಭಿನ್ನವಾದ ಪ್ರಚಾರ ಶೈಲಿಯ ಮೂಲಕ ಗಮನಸೆಳೆಯುತ್ತಿರುವ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನವೆಂಬರ್ನಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಅಭಿಷೇಕ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ಅನೀಶ್ ತೇಜೇಶ್ವರ್ ನಾಯಕನಾಗಿ ನಟಿಸಿದ್ದಾರೆ. ನವೆಂಬರ್ನಲ್ಲಿ ಸಿನಿಮಾ ಬರಲಿದೆ ಅನ್ನೋದನ್ನಷ್ಟೇ ಚಿತ್ರತಂಡ ಘೋಷಿಸಿದ್ದು ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದಿದೆ.

ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿರುವ ಅನೀಶ್ ‘ಆರಾಮ್ ಅರವಿಂದ್ ಸ್ವಾಮಿ’ ಸಿನಿಮಾ ಮೂಲಕ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರದ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ನಮ್ ಗಣಿ ಬಿಕಾಂ ಪಾಸ್’ ಹಾಗೂ ‘ಗಜಾನನ ಆ್ಯಂಡ್ ಗ್ಯಾಂಗ್’ ಸಿನಿಮಾ ಬಳಿಕ ಅಭಿಷೇಕ್ ಶೆಟ್ಟಿ ಕೈಗೆತ್ತಿಕೊಂಡಿರುವ ಪ್ರಾಜೆಕ್ಟ್ ಇದಾಗಿದೆ. ಅನೀಶ್ಗೆ ಮಿಲನಾ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಜೋಡಿಯಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

‘ಅಕಿರ’ ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ‘ಗುಳ್ಟು’ ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ವೈವಿಬಿ ಶಿವಸಾಗರ್ ಛಾಯಾಚಿತ್ರಗ್ರಹಣ, ಉಮೇಶ್ ಆರ್. ಬಿ. ಸಂಕಲನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.