ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು ತಮ್ಮದೇ ಕಾದಂಬರಿಯನ್ನು ಆಧರಿಸಿ ನಿರ್ದೇಶಿಸಿರುವ ‘ಸ್ವಪ್ನಮಂಟಪ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ಯು’ ಪ್ರಮಾಣಪತ್ರ ನೀಡಿದೆ.

ಚಿತ್ರಕ್ಕೆ ಬರಗೂರು ಅವರೇ ಚಿತ್ರಕಥೆ, ಸಂಭಾಷಣೆ, ಗೀತರಚನೆ ಮಾಡಿದ್ದಾರೆ. ವಿಜಯ ರಾಘವೇಂದ್ರ ಹಾಗೂ ರಂಜಿನಿ ರಾಘವನ್ ಮುಖ್ಯಭೂಮಿಕೆಯಲ್ಲಿ ಇದ್ದಾರೆ. ಬಾಬುನಾಯ್ಕ್ ತಮ್ಮ ಮಲೈಮಹದೇಶ್ವರ ಎಂಟರ್‌ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಚಿತ್ರವನ್ನು ನಿರ್ಮಿಸಿದ್ದಾರೆ.

‘ಚಿತ್ರವು ಪಾರಂಪರಿಕ ಸ್ಥಳಗಳ ಮಹತ್ವ ಮತ್ತು ಸಂರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ, ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಸಾಂಕೇತಿಕವಾದ ಈ ಕಥಾವಸ್ತುವು ಪಾರಂಪರಿಕ ಸ್ಥಳಗಳ ರಕ್ಷಣೆ ವಿಷಯದಲ್ಲಿ ಪ್ರಾತಿನಿಧಿಕವೂ ಆಗುತ್ತದೆ’ ಎಂದಿದ್ದಾರೆ ಬರಗೂರು ರಾಮಚಂದ್ರಪ್ಪ.

ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಈ ಸಿನಿಮಾದ ಒಂದು ವಿಶೇಷ. ಸುಂದರ್‌ರಾಜ್, ಶೋಭಾ ರಾಘವೇಂದ್ರ, ರಜನಿ, ಮಹಾಲಕ್ಷ್ಮಿ, ಸುಂದರರಾಜ ಅರಸು, ರಾಜಪ್ಪ ದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿ ರಮೇಶ್, ಗುಂಡಿ ರಮೇಶ್ ತಾರಾಗಣದಲ್ಲಿ ಇದ್ದಾರೆ. ಚಿತ್ರಕ್ಕೆ ನಾಗರಾಜ ಆದವಾನಿ ಛಾಯಾಚಿತ್ರಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.