ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕರಾವಳಿ’ಯಲ್ಲಿ ಪ್ರಜ್ವಲ್‌ ಯಕ್ಷರೂಪ

Published 11 ಏಪ್ರಿಲ್ 2024, 23:30 IST
Last Updated 11 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ‘ಕರಾವಳಿ’ ಪ್ರವೇಶಿಸಿದ್ದ ಪ್ರಜ್ವಲ್ ದೇವರಾಜ್ ಇದೀಗ ಗಂಡುಕಲೆ ಯಕ್ಷಗಾನದ ವೇಷ ಧರಿಸಿ ಮಿಂಚಿದ್ದಾರೆ. 

ಗುರುದತ್‌ ಗಾಣಿಗ ಆ್ಯಕ್ಷನ್‌ ಕಟ್‌ ಹೇಳಿರುವ ‘ಕರಾವಳಿ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಯುಗಾದಿ ಸಂದರ್ಭದಲ್ಲಿ ಸಿನಿಮಾದ ವಿಶೇಷ ಪೋಸ್ಟರ್‌ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ. ಇದರಲ್ಲಿ ಪ್ರಜ್ವಲ್‌ ಅವರ ಹೊಸ ಲುಕ್‌ ರಿವೀಲ್‌ ಆಗಿದೆ. ‘ಕರಾವಳಿ’ ಸಿನಿಮಾದಲ್ಲಿ ಪ್ರಜ್ವಲ್ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಕಂಬಳದ ಜೊತೆಗೆ ಯಕ್ಷಗಾನ ಕೂಡ ಈ ಸಿನಿಮಾದ ಪ್ರಮುಖ ಭಾಗಗಳಲ್ಲಿ ಒಂದಾಗಿದೆ. ಯಕ್ಷಗಾನ ಭಾಗವತರಾದ ಪಲ್ಲವ ಗಾಣಿಗ ಪ್ರಜ್ವಲ್‌ ಅವರಿಗೆ ಈ ಲುಕ್ ವಿನ್ಯಾಸ ಮಾಡಿರುವುದು ಮತ್ತೊಂದು ವಿಶೇಷ. ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಸದ್ಯ ಶೇ 40ರಷ್ಟು ಚಿತ್ರೀಕರಣ ಮುಗಿಸಿದ್ದು 2ನೇ ಹಂತದ ಚಿತ್ರೀಕರಣ ಇದೇ ವಾರದಲ್ಲಿ ಆರಂಭವಾಗಲಿದೆ. ಮಂಗಳೂರಿನ ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT