ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂಟೆಬಿಲ್ಲೆ ಸಿನಿಮಾಕ್ಕೆ ಮಹೂರ್ತ

Published 10 ಮೇ 2024, 23:15 IST
Last Updated 10 ಮೇ 2024, 23:15 IST
ಅಕ್ಷರ ಗಾತ್ರ

ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಜಿ.ಬಿ.ಎಸ್‌. ಸಿದ್ದೇಗೌಡ ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ.

ಯುವನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ‌. ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರ ಲೋಕೇಶ್, ಶಂಕರ್ ಅಶ್ವತ್ಥ್, ಚಂದ್ರಪ್ರಭ ನಟಿಸಲಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ಕುಂಟೆಬಿಲ್ಲೆ‌. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು ಎಲ್ಲವನ್ನೂ ಕಟ್ಟಿಕೊಡಲಿದ್ದೇವೆ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದರು.

ನಿರ್ಮಾಪಕ ಎಸ್.ಬಿ. ಶಿವು, ನಿರ್ಮಾಪಕ ಕುಮಾರ್ ಗೌಡ ಮಾತನಾಡಿದರು. ಮೇಘಶ್ರೀ ಪಾತ್ರದ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT