ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.6ರಂದು ‘ನಂದಿ ಚಲನಚಿತ್ರ ಪ್ರಶಸ್ತಿ’ ಪ್ರದಾನ

Published 28 ನವೆಂಬರ್ 2023, 23:41 IST
Last Updated 28 ನವೆಂಬರ್ 2023, 23:41 IST
ಅಕ್ಷರ ಗಾತ್ರ

ಮನರಂಜನಾ ಕ್ಷೇತ್ರದ ಸಾಧಕರನ್ನು ಗುರುತಿಸಿ, ಗೌರವಿಸುವ ‘ನಂದಿ ಚಲನಚಿತ್ರ ಪ್ರಶಸ್ತಿ–2023’ ಸಮಾರಂಭವು ಡಿ.6ರಂದು ಬೆಂಗಳೂರಿನ ಒರಾಯನ್‌ ಮಾಲ್‌ನ ಆವರಣದಲ್ಲಿ ನಡೆಯಲಿದೆ.

ಇತ್ತೀಚೆಗೆ ನಟ ಸುದೀಪ್‌ ಅವರು ಈ ಪ್ರಶಸ್ತಿಯನ್ನು ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷ ಭಾ.ಮ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ ಈ ಪ್ರಶಸ್ತಿಯ ಸಂಸ್ಥಾಪಕರಾಗಿದ್ದಾರೆ. ಭಾ.ಮ.ಗಿರೀಶ್, ಹರ್ಷಿತಾ, ನಂದಿತಾ ಹಾಗೂ ಅಶೋಕ್ ಅವರು ಪ್ರಶಸ್ತಿಯ ನಿರ್ದೇಶಕ ಸ್ಥಾನದಲ್ಲಿದ್ದಾರೆ. ಇದು ಪ್ರಶಸ್ತಿಯ ಇದು ಮೊತ್ತಮೊದಲ ಆವೃತ್ತಿಯಾಗಿದೆ.  

‘ಈ ಪ್ರಶಸ್ತಿಗಳು ಯಾರಿಗೆ ಸಲ್ಲಬೇಕೋ ಅವರಿಗೆ ಸಲ್ಲಲಿ. ಮಿಕ್ಕಿದವರೆಲ್ಲಾ ದುಡ್ಡು ಮಾಡುತ್ತಿದ್ದಾರೆ. ಪ್ರಶಸ್ತಿ, ದುಡ್ಡು ಎಂದು ನೋಡಿದಾಗ ಪ್ರಶಸ್ತಿ ಬಿಟ್ಟು ದುಡ್ಡಿಗೆ ಕೈ ಹಾಕುವವರು ಇದ್ದಾರೆ. ಪ್ರಶಸ್ತಿಗೆ ಗೌರವ ಕೊಟ್ಟು ಅದಕ್ಕಾಗಿ ಬಾಳಿ ಬದುಕುವವರಿಗೆ ನೀಡಿ. ನಂದಿ ಬಹಳ ಶ್ರೇಷ್ಠ. ಆ ಹೆಸರಲ್ಲಿ ಪ್ರಶಸ್ತಿ ನೀಡುತ್ತಿದ್ದೀರಿ ಎಂದರೆ, ಅದು ಅಷ್ಟೇ ಶುದ್ಧವಾಗಿರಲಿ’ ಎಂದು ಸುದೀಪ್‌ ಹಾರೈಸಿದರು. ನಂದಿ ಪ್ರಶಸ್ತಿಯಲ್ಲಿ ಕನ್ನಡ ಸಿನಿಮಾಗಳು, ಪ್ರಾದೇಶಿಕ ಭಾಷೆಗಳಾದ ತುಳು, ಕೊಡವ, ಕೊಂಕಣಿ, ಬ್ಯಾರಿ ಹಾಗೂ ಬಂಜಾರ ಈ ಭಾಷೆಗಳ ಸಿನಿಮಾಗಳಿಗೂ ಪ್ರಾಮುಖ್ಯ ನೀಡಲಾಗಿದೆ. ಸಾಹಿತ್ಯ, ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. 50ಕ್ಕೂ ಹೆಚ್ಚು ವಿಭಾಗದ ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT