ಶುಕ್ರವಾರ, ಡಿಸೆಂಬರ್ 3, 2021
20 °C

ಸಿನಿಮಾ: ‘ನೀ ಸಿಗೋವರೆಗೂ’ ಹುಡುಕಿದ್ದಾರೆ ಶಿವಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟ ಶಿವರಾಜಕುಮಾರ್ ಅಭಿನಯದ 124ನೇ ಚಿತ್ರ ‘ನೀ ಸಿಗೋವರೆಗೂ’ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

ಬೆಂಗಳೂರು, ಚಿಕ್ಕಮಗಳೂರು, ಜಮ್ಮು ಮತ್ತು ಕಾಶ್ಮೀರ ಹಾಗೂ ಅಮೆರಿಕದಲ್ಲಿ ಚಿತ್ರೀಕರಣ ನಡೆಯಲಿದೆ.

ಶಿವರಾಜ್‌ಕುಮಾರ್‌ ಈ ಚಿತ್ರದಲ್ಲಿ ಸೇನಾಧಿಕಾರಿಯಾಗಿದ್ದಾರೆ. ಈ ಹೊಸ ಲುಕ್ ದಸರಾದಂದು ಅನಾವರಣಗೊಂಡಿದೆ. 

ಭಾವನಾತ್ಮಕ ಪ್ರೇಮಕಥಾಹಂದರದ ಈ ಚಿತ್ರವನ್ನು ರಾಮ್ ಧೂಲಿಪುಡಿ ನಿರ್ದೇಶನ ಮಾಡುತ್ತಿದ್ದಾರೆ.

ಮೆರ್ಹಿನ್ ಫಿರ್ಜಾದ ನಾಯಕಿ. ನಾಜರ್, ಸಾಧುಕೋಕಿಲ, ಸಂಪತ್ ಕುಮಾರ್, ಮಂಗ್ಲಿ ತಾರಾಗಣದಲ್ಲಿದ್ದಾರೆ.

‘ಟಗರು’ ಖ್ಯಾತಿಯ ಚರಣ್‌ರಾಜ್‌ ಸಂಗೀತ ನಿರ್ದೇಶನ, ಮಹೇಂದ್ರ ಸಿಂಹ ಛಾಯಾಗ್ರಹಣ, ದೀಪು ಸಂಕಲನ ಹಾಗೂ ರವಿ ಸಂತೆಹಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ನಾರಾಲ ಶ್ರೀನಿವಾಸ್ ರೆಡ್ಡಿ ಶ್ರೀಕಾಂತ್ ಧುಲಿಪುಡಿ ಹಾಗೂ ಸ್ವಾತಿ ವನಪಲ್ಲಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಕುಡಿಪುಡಿ ವಿಜಯ್ ಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು