ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೆಟ್ಟೇರಿತು ಪೃಥ್ವಿ ಅಂಬಾರ್ ‘ಚೌಕಿದಾರ್’....

Published 6 ಜುಲೈ 2024, 4:59 IST
Last Updated 6 ಜುಲೈ 2024, 4:59 IST
ಅಕ್ಷರ ಗಾತ್ರ

'ದಿಯಾ’ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ನಟಿಸುತ್ತಿರುವ ‘ಚೌಕಿದಾರ್‌’ ಸಿನಿಮಾಗೆ ಚಾಲನೆ ಸಿಕ್ಕಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ. 'ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಚೌಕಿದಾರ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ‘ಡೈಲಾಗ್ ಕಿಂಗ್’ ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ದೊಡ್ಮನೆ ಕುಡಿ ಧನ್ಯರಾಮ್ ಕುಮಾರ್ ನಾಯಕಿಯಾಗಿ ನಟಿಸಿದ್ದಾರೆ. ಮುಹೂರ್ತದ ಬಳಿಕ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಸಿನಿಮಾ ಹಂಚಿಕೊಂಡಿತು.

 ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಮಾತನಾಡಿ, ಇದು ನನ್ನ ಆರನೇ ಸಿನಿಮಾ. ಬಹುಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಕಲ್ಲಹಳ್ಳಿ ಚಂದ್ರಶೇಖರ್ ಈ ಸಿನಿಮಾದ ನಿರ್ಮಾಪಕರು. ರಥಾವರ ಹಿಟ್ ಆದಮೇಲೆ ನನಗೆ ಒಂದು ಸಿನಿಮಾ ಮಾಡಿ ಎಂದು ಕೇಳುತ್ತಿದ್ದರು. ಪೃಥ್ವಿ ಅವರನ್ನು ಲವರ್ ಬಾಯ್ ರೀತಿ ತೋರಿಸಿದ್ದಾರೆ. ಬೇರೆ ರೀತಿ ಟ್ರೈ ಮಾಡಬೇಕು ಎಂಬ ಆಸೆಯಿಂದ ಕಥೆ ಹೇಳಿದೆ. ಅವರು ಒಕೆ ಎಂದರು. ಅವರು ಪಾತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. 

ನಟ ಪೃಥ್ವಿ ಅಂಬಾರ್ ಮಾತನಾಡಿ, ತಾಯಿ ಆಶೀರ್ವಾದದಿಂದ ಚೌಕಿದಾರ್ ಸಿನಿಮಾಗೆ ಚಾಲನೆ ಸಿಕ್ಕಿದೆ. ಒಂದು ದಿನ ಟೀಸರ್ ಶೂಟ್ ಮಾಡಿದ್ದೇವೆ.‌ ಬಹಳ ಖುಷಿ.‌ ಲಕ್ಕಿ ಫೀಲ್ ಮಾಡುತ್ತೇನೆ. ಜೀವನದ ಬಗ್ಗೆ ಬಹಳ ಅನುಭವವಿದೆ. ಕಂಪ್ಲೀಟ್ ಫ್ಯಾಮಿಲಿ ಜೊತೆಗೆ ಬೇರೆ ಎಲಿಮೆಂಟ್ ಮಿಕ್ಸ್ ಮಾಡಲಾಗಿದೆ. ಚೌಕಿದಾರ್ ಟೈಟಲ್ ಕೊಡುವ ವೈಬ್ಸ್ ಕಥೆಯಲ್ಲಿರುತ್ತದೆ ಎಂದರು.

ಸಾಯಿಕುಮಾರ್, ನಟಿ ಧನ್ಯ ರಾಮ್ ಕುಮಾರ್ ಮಾತನಾಡಿದರು. ವಿದ್ಯಾಶೇಖರ್ ಎಂಟರ್‌ಟೈನ್ಮೆಂಟ್‌ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ‘ಚೌಕಿದಾರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಸಂಗೀತ ನಿರ್ದೇಶನ, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಸಾಹಿತ್ಯ ಚಿತ್ರಕ್ಕಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT