ಶುಕ್ರವಾರ, ಡಿಸೆಂಬರ್ 2, 2022
19 °C

‘ಅರಸಯ್ಯನ ಪ‍್ರೇಮ ಪ್ರಸಂಗ’ ಪೋಸ್ಟರ್‌ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಅರಸಯ್ಯನ ಪ‍್ರೇಮ ಪ್ರಸಂಗ’ ಚಿತ್ರದ ಪೋಸ್ಟರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಮೇಘಶ್ರೀ ರಾಜೇಶ್ ಅವರು ರಾಜ್ ಕಮಲ ಪಿಕ್ಚರ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಅವರ ನಿರ್ಮಾಣದ ಮೊದಲ‌ ಚಿತ್ರ. ಮೇಘಶ್ರೀ ಅವರಿಗೆ ಚಿತ್ರ ನಿರ್ಮಾಣಕ್ಕೆ ಪತಿ, ಲೆಕ್ಕ ಪರಿಶೋಧಕ ರಾಜೇಶ್ ಸಾಥ್ ನೀಡಿದ್ದಾರೆ.

ಪೋಸ್ಟರ್‌ ಅನ್ನು ನಟ ರಾಘವೇಂದ್ರ ರಾಜ್‌ಕುಮಾರ್‌ ಹಾಗೂ ಮಂಗಳಾ ರಾಜ್‌ಕುಮಾರ್‌ ಬಿಡುಗಡೆ ಮಾಡಿದರು. ‘ಫ್ರೆಂಚ್ ಬಿರಿಯಾನಿ’, ‘ಗುರು ಶಿಷ್ಯರು’ ಚಿತ್ರದ ಮೂಲಕ ಎಲ್ಲರ ಮನ ಸೆಳೆದಿರುವ ಮಹಂತೇಶ್ ಹಿರೇಮಠ ಪ್ರಮುಖ ಪಾತ್ರದಲ್ಲಿದ್ದಾರೆ.

ಜೆ.ವಿ.ಆರ್. ದೀಪು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಸನ, ಗೋರೂರಿನ ಸುತ್ತಮುತ್ತಲ್ಲಿನ ಪರಿಸರದಲ್ಲಿ ಚಿತ್ರೀಕರಣವಾಗಿದೆ.‌

ಐದು ಹಾಡುಗಳಿವೆ. ಪ್ರವೀಣ್ - ಪ್ರದೀಪ್ ಸಂಗೀತ ನೀಡಿದ್ದಾರೆ. ಗುರುಪ್ರಸಾದ್ ನಾರ್ನಾಡ್ ಛಾಯಾಗ್ರಹಣ, ಸುನೀಲ್ ಕಶ್ಯಪ್ ಸಂಕಲನವಿರುವ ಈ ಚಿತ್ರಕ್ಕೆ ಹರೀಶ್ ಹಾಗೂ ಜಿ.ವಿ.ಆರ್. ದೀಪು ಸಂಭಾಷಣೆ ಬರೆದಿದ್ದಾರೆ. ರಶ್ಮಿತಾ ಗೌಡ, ವಿಜಯ್ ಚೆಂಡೂರ್, ಪಿ.ಡಿ.ಸತೀಶ್, ರಘು ರಮಣಕೊಪ್ಪ, ಜಹಂಗೀರ್ ಮುಂತಾದವರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು