ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜುಲೈನಲ್ಲಿ ‘ಕಾದಾಡಿ’ ತೆರೆಗೆ

Published 1 ಜುಲೈ 2024, 0:51 IST
Last Updated 1 ಜುಲೈ 2024, 0:51 IST
ಅಕ್ಷರ ಗಾತ್ರ

ನಟ ಶಶಿಕುಮಾರ್ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸಿರುವ ‘ಕಾದಾಡಿ’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಸತೀಶ್ ಮಾಲೆಂಪಾಟಿ ನಿರ್ದೇಶಿಸಿರುವ ಚಿತ್ರವನ್ನು ಅರುಣಂ ಫಿಲ್ಮ್ಸ್‌ನಿರ್ಮಾಣ ಮಾಡಿದೆ. ಚಿತ್ರದ ನಾಲ್ಕು ಹಾಡುಗಳು ಹಾಗೂ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿತು.

‘ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ. ಕನ್ನಡದಲ್ಲಿ ಜುಲೈನಲ್ಲಿ ಬಿಡುಗಡೆಗೊಂಡು, ಆಗಸ್ಟ್‌ನಲ್ಲಿ ತೆಲುಗು, ತಮಿಳಿನಲ್ಲಿ ರಿಲೀಸ್ ಮಾಡುವ ಯೋಜನೆಯಿದೆ. ಜೀವನದಲ್ಲಿನ ತ್ಯಾಗ ಮತ್ತು ಕಾದಾಟದ ಕುರಿತ ಕಥೆ ಇದೆ. ಥ್ರಿಲ್ಲರ್‌ ಜಾನರ್‌ನ ಸಿನಿಮಾವಿದು’ ಎಂದರು ನಿರ್ದೆಶಕರು.

ಲಾವಣ್ಯ ಸಾಹುಕಾರ, ಚಾಂದಿನಿ ತಮಿಳರಸನ್ ನಾಯಕಿಯರು. ಉಳಿದಂತೆ ಪೋಸಾನಿ, ರವಿಕಾಳೆ, ಮಾರಿಮುತ್ತು, ಪ್ರೇಮ್‌ಮನೋಹರ್ ಮುಂತಾದವರು ನಟಿಸಿದ್ದಾರೆ. ಆರು ಹಾಡುಗಳಿಗೆ ಭೀಮ್ಸ್ ಸಿಸಿರಿಲಿಯೋ ಸಂಗೀತ ಸಂಯೋಜಿಸಿದ್ದಾರೆ. ಛಾಯಾಚಿತ್ರಗ್ರಹಣ ಡಿ.ಯೋಗಿಪ್ರಸಾದ್ ಅವರದ್ದು. ಪ್ರಕಾಶ್‌ತೋಟ ಸಂಕಲನವಿದೆ. ಗೋವಾ, ಚಿಕ್ಕಮಗಳೂರು, ಹೈದರಬಾದ್, ಚೆನ್ನೈ ಮೊದಲಾದೆಡೆ ಚಿತ್ರೀಕರಣಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT