ಬುಧವಾರ, ನವೆಂಬರ್ 30, 2022
21 °C
ವಿನೋದ್ ಪ್ರಭಾಕರ್ ನಟನೆಯ ಹೊಸ ಸಿನಿಮಾ

ಟೈಗರ್ ಟಾಕೀಸ್; ಶೀರ್ಷಿಕೆಯಲ್ಲೇ ಅಬ್ಬರಿಸುತ್ತಿದ್ದಾನೆ ‘ಲಂಕಾಸುರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಟೈಗರ್ ಟಾಕೀಸ್ ಬ್ಯಾನರ್‌ ಅಡಿ ವಿನೋದ್ ಪ್ರಭಾಕರ್ ನಟನೆ, ನಿರ್ಮಾಣದ ಚಿತ್ರ ‘ಲಂಕಾಸುರ’ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆಯಾಗಿ ಭರ್ಜರಿ ಸದ್ದು ಮಾಡುತ್ತಿದೆ. 

‘ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ.
ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ.
ಲಂಕಾಸುರ ಲಂಕಾಸುರ ...’

ಈ ಹಾಡಿಗೆ ವೀಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದ ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಅವರೆ ಈ ಹಾಡನ್ನು ಹಾಡಿದ್ದಾರೆ. ಜೋಯೆಲ್ ಶಾಸ್ತ್ರಿ ಗಿಟಾರ್ ನುಡಿಸಿದ್ದಾರೆ. ಮೋಹನ್ ಕುಮಾರ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿನಲ್ಲಿ ನಾಯಕ ವಿನೋದ್ ಪ್ರಭಾಕರ್ ಅಭಿನಯಿಸಿದ್ದಾರೆ. ಎಚ್.ಎಂ.ಟಿ., ಟೊರಿನೊ ಫ್ಯಾಕ್ಟರಿ ಹಾಗೂ ಮಲ್ಲೇಶ್ವರಂ ಧೋಬಿ ಘಾಟ್ ನಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಆರು ಸೆಟ್ ಗಳಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.

ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು