ಚಂದನವನದ ತೆರೆಗಳಲ್ಲಿ ಇಂದು(ಮೇ 15) ಮೂರು ಸಿನಿಮಾಗಳು ತೆರೆಕಂಡಿವೆ.

ಲೋ ನವೀನ

ಗಾಯಕರಾಗಿ ಗುರುತಿಸಿಕೊಂಡಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರವಿದು. ಆರ್ಕೆಸ್ಟ್ರಾಗಳ ಮೂಲಕ ಗುರುತಿಸಿಕೊಂಡ ನವೀನ್ ಸಜ್ಜು ಅವರು, ಸುನೀಲ್ ಮೈಸೂರು ಹಾಗೂ ಅನೇಕ ಸ್ನೇಹಿತರ ಜೊತೆಗೂಡಿ ಈ ಚಿತ್ರದ ಕಥೆ ಬರೆದಿದ್ದಾರೆ. ಮನರಂಜನೆಯೇ ಪ್ರಧಾನವಾಗಿರುವ ಚಿತ್ರವನ್ನು ಧನುರ್ಧಾರಿ ಪವನ್ ನಿರ್ದೇಶಿಸಿದ್ದಾರೆ. ಬೆನ್ ಚಿಕ್ಕಸ್ವಾಮಿ ಅರ್ಪಿಸುವ, ಕೀರ್ತಿಸ್ವಾಮಿ ನಿರ್ಮಿಸಿರುವ ಈ ಚಿತ್ರಕ್ಕೆ ರಿಷಿಕೇಶ್ ಛಾಯಾಚಿತ್ರಗ್ರಹಣ, ವಿನಾಯಕ್ ಆಚಾರ್ಯ ನೃತ್ಯ ನಿರ್ದೇಶನವಿದೆ. ನವೀನ್ ಸಜ್ಜು ಅವರೇ ಸಂಗೀತ ಸಂಯೋಜಿಸಿರುವ ಐದು ಹಾಡುಗಳು ಚಿತ್ರದಲ್ಲಿವೆ.

ಶೇರ್

‘ಕನ್ನಡತಿ’ ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಪ್ರಸಿದ್ಧ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದ್ದು, ಗ್ರೇಸ್ ರಾಜ್ ಪ್ರೊಡಕ್ಷನ್ ಲಾಂಛನದಲ್ಲಿ ಸುದರ್ಶನ್ ಸುಂದರರಾಜ್ ನಿರ್ಮಾಣ ಮಾಡಿದ್ದಾರೆ. ಸಿನಿಮಾವು ಆ್ಯಕ್ಷನ್ ಥ್ರಿಲ್ಲರ್ ಜಾನರ್ನಲ್ಲಿದ್ದು, ಐದು ಅದ್ದೂರಿಯಾದ ಸಾಹಸ ಸನ್ನಿವೇಶಗಳನ್ನು ಒಳಗೊಂಡಿದೆ. ಕಿಟ್ಟಿ ಕೌಶಿಕ್ ಛಾಯಾಚಿತ್ರಗ್ರಹಣ, ವೆಂಕಿ ಯುಡಿವಿ ಸಂಕಲನ ಹಾಗೂ ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕ್ರಿಸ್(ಗಿಲ್ಲಿ), ಸುರೇಖಾ, ತನೀಷಾ ಕುಪ್ಪಂಡ, ಯಶ್ ಶೆಟ್ಟಿ, ಶೋಭರಾಜ್, ಬಲ ರಾಜವಾಡಿ, ವೀಣಾ ಸುಂದರ್ ತಾರಾಬಳಗದಲ್ಲಿದ್ದಾರೆ.

ಶಿಖಂಡಿ

ಪೋಲಾ ಪ್ರವೀಣ್ ಕುಮಾರ್ ನಿರ್ಮಾಣದ ಹಾಗೂ ಗುರುಮೂರ್ತಿ ವಿ. ನಿರ್ದೇಶನದ ಸಿನಿಮಾವಿದು. ಮಾಲಾಶ್ರೀ ಅವರು ಅಭಿನಯಿಸಿರುವ ‘ಮಾರಕಾಸ್ತ್ರ’ ಸಿನಿಮಾ ನಿರ್ದೇಶಿಸಿದ್ದ ಗುರುಮೂರ್ತಿ ಈ ಸಿನಿಮಾ ನಿರ್ದೇಶಿಸಿದ್ದಾರೆ. ಮಹಾಭಾರತದಲ್ಲಿ ಬರುವ ‘ಶಿಖಂಡಿ’ ಪಾತ್ರವನ್ನು ಆಧರಿಸಿರುವ ಕಥಾಹಂದರ ಚಿತ್ರದಲ್ಲಿದೆ. ಯುವರಾಜ್ ನಾಯಕನಾಗಿ, ಖ್ಯಾತಿ ನಾಯಕಿಯಾಗಿ ನಟಿಸಿದ್ದಾರೆ. ಮೊದಲು ಕನ್ನಡದಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಆನಂತರ ಉಳಿದ ಭಾಷೆಗಳಲ್ಲಿ ಡಬ್ ಆಗಿ ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆಗೆ ಬರಲಿದೆ. ನಿಖಿತಾಸ್ವಾಮಿ, ನೀತು, ವೇದ, ಚಾಂದಿನಿ ಚಿತ್ರದ ತಾರಾಬಳಗದಲ್ಲಿದ್ದಾರೆ. ಮಂಜು ಕವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-1836937323

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.