ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದು ವಿನಯ್‌ ‘ಪೆಪೆ’ ಲುಕ್‌

Published 8 ಮೇ 2023, 19:31 IST
Last Updated 8 ಮೇ 2023, 19:31 IST
ಅಕ್ಷರ ಗಾತ್ರ

ದೊಡ್ಮನೆ ಕುಡಿ, ‘ರಾಯಲ್‌ ಸ್ಟಾರ್‌’ ವಿನಯ್‌ ರಾಜ್‌ಕುಮಾರ್‌ ನಟನೆಯ ‘ಪೆಪೆ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ವಿನಯ್‌ ರಾಜ್‌ಕುಮಾರ್‌ ಜನ್ಮದಿನದ ಸಂದರ್ಭದಲ್ಲಿ ‘ಪೆಪೆ’ ಟೀಸರ್‌ ಬಿಡುಗಡೆಯಾಗಿದೆ. 

ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ಮೂಡಿಬಂದಿರುವ ಟೀಸರ್ ಝಲಕ್‌ನಲ್ಲಿ ವಿನಯ್ ರಾಜ್‌ಕುಮಾರ್ ರಗಡ್ ಲುಕ್‌ನಲ್ಲಿ ಮಿಂಚಿದ್ದಾರೆ. ‘ಪೆಪೆ’ ಗ್ಯಾಂಗ್‌ಸ್ಟರ್‌ ಸಿನಿಮಾ ಆಗಿದ್ದು, ವಿನಯ್ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಇಲ್ಲಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವು ಸದ್ಯ ಚಿತ್ರೀಕರಣ ಪೂರ್ಣಗೊಳಿಸಿದೆ. ಪೋಸ್ಟ್‌ ಪ್ರೊಡಕ್ಷನ್‌ನ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ ಎಂದಿದೆ ಚಿತ್ರತಂಡ. 

ಶ್ರೀಲೇಶ್‌ ಎಸ್‌. ನಾಯರ್‌ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಾಲ ರಾಜ್‌ವಾಡಿ, ಮೆದಿನಿ ಕೆಳಮನಿ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್ ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್ ಜಿ. ಕಾಸರಗೋಡು ಛಾಯಾಚಿತ್ರಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನವಿದೆ.

ಡಾ. ರವಿವರ್ಮಾ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರದಲ್ಲಿ ‘ಪೆಪೆ’ ಸಿನಿಮಾದ ಚಿತ್ರೀಕರಣ ನಡೆದಿದೆ. ಉದಯ್ ಸಿನಿ ವೆಂಚರ್, ದೀಪ ಫಿಲ್ಮ್ಸ್‌ ಬ್ಯಾನರ್‌ನಡಿ ಉದಯ್ ಶಂಕರ್ ಮತ್ತು ಶ್ರೀರಾಮ್ ಬಿ.ಎಂ. ಕೋಲಾರ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT