ಪ್ರಣಮ್ ದೇವರಾಜ್ ನಾಯಕನಾಗಿ ನಟಿಸಿರುವ ‘S\O ಮುತ್ತಣ್ಣ’ ಚಿತ್ರದ ‘ಒನ್ ಅಂಡ್ ಓನ್ಲಿ ಸುಖ’ ಗೀತೆಗೆ ಸಂಚಿತ್ ಹೆಗಡೆ ಧ್ವನಿಯಾಗಿದ್ದಾರೆ. ಪುರಾತನ ಫಿಲ್ಮ್ಸ್ ನಿರ್ಮಾಣದ ಚಿತ್ರಕ್ಕೆ ಶ್ರೀಕಾಂತ್ ಹುಣಸೂರು ನಿರ್ದೇಶನವಿದೆ.

‘ಗೀತೆಗೆ ಯೋಗರಾಜ್ ಭಟ್ ಸಾಹಿತ್ಯವಿದೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶ್ರೀಘ್ರದಲ್ಲೇ ಚಿತ್ರ ತೆರೆಗೆ ಬರಲಿದೆ’ ಎಂದಿದೆ ಚಿತ್ರತಂಡ.

ತಂದೆ - ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಚಿತ್ರವಿದು. ‘ದಿಯಾ’ ಖ್ಯಾತಿಯ ಖುಷಿ ರವಿ ನಾಯಕಿ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ ಮುಂತಾದವರು ತಾರಾಗಣದಲ್ಲಿದ್ದಾರೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಸಾಹಿತ್ಯವಿದೆ. ಸ್ಕೇಟಿಂಗ್ ಕೃಷ್ಣ ಛಾಯಾಚಿತ್ರಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.