ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೇಮ್‌ ಹೊಸ ಚಿತ್ರ

Published 23 ಏಪ್ರಿಲ್ 2024, 21:16 IST
Last Updated 23 ಏಪ್ರಿಲ್ 2024, 21:16 IST
ಅಕ್ಷರ ಗಾತ್ರ

ಇತ್ತೀಚೆಗಷ್ಟೇ ‘ನೆನಪಿರಲಿ’ ಪ್ರೇಮ್‌ ಅಭಿನಯದ ‘ಅಪ್ಪಾ ಐ ಲವ್ ಯೂ’ ಚಿತ್ರ ತೆರೆ ಕಂಡಿತ್ತು. ಒಂದು ವಿರಾಮದ ಬಳಿಕ ಚಿತ್ರರಂಗದಲ್ಲಿ ಮತ್ತೆ ಸಕ್ರಿಯವಾಗಿರುವ ಪ್ರೇಮ್‌ ಮತ್ತೊಂದು ಚಿತ್ರ ಘೋಷಿಸಿದ್ದಾರೆ.

ಹೆಸರಿಡದ ಚಿತ್ರದಲ್ಲಿ ಪ್ರೇಮ್‌ ರಗಡ್ ಅವತಾರ ತಾಳಿದ್ದಾರೆ. ಸಿನಿಮಾದ ಮುಹೂರ್ತ ನೆರವೇರಿದ್ದು, ಹನ್ನೊಂದು ವರ್ಷಗಳ ಬಳಿಕ ಮತ್ತೆ ಅವರು ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ತೇಜಸ್ ಬಿ.ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಮಧು ಗೌಡ ಬಂಡವಾಳ ಹೂಡಿದ್ದಾರೆ. ‘ಇದು ನನ್ನ ಮೊದಲ ಸಿನಿಮಾ. ಸಸ್ಪೆನ್ಸ್, ಥ್ರಿಲ್ಲರ್ ಚಿತ್ರ ಇದಾಗಿದೆ. ಟೈಟಲ್ ಚರ್ಚೆಯಲ್ಲಿದೆ. ರಂಗಾಯಣ ರಘು ಚಿತ್ರದ ಭಾಗವಾಗಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದರು ನಿರ್ದೇಶಕರು.

‘ಈ ಮೊದಲು ಆ್ಯಕ್ಷನ್‌ ಸಿನಿಮಾ ಮಾಡಿದ್ದೆ. ಆದರೆ ಬಹಳಷ್ಟು ಗ್ಯಾಪ್ ಆಗಿತ್ತು. ಪ್ರೇಮಕಥೆಗಳಿಗೆ ಬ್ರ್ಯಾಂಡ್ ಆಗಿದ್ದೆ. ಒಂದೊಳ್ಳೆ ಕಥೆ ಸಿಕ್ಕಿದೆ. ಹೀಗಾಗಿ ಈ ಚಿತ್ರ ಒಪ್ಪಿಕೊಂಡೆ. ಸಿನಿಮಾದಲ್ಲಿ ಖಡಕ್‌ ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ’ ಎಂದು ಪ್ರೇಮ್‌ ತಿಳಿಸಿದರು.

ವಾಸುಕಿ ವೈಭವ್ ಸಂಗೀತ, ಆನಂದ್ ಮೀನಾಕ್ಷಿ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT