ಚಿತ್ರದ ಹಾಡುಗಳೇ ಶೀರ್ಷಿಕೆಯಾಗಿಸಿಕೊಂಡ ಸಾಕಷ್ಟು ಚಿತ್ರಗಳು ಬಂದಿವೆ. ಇದೇ ಸಾಲಿಗೆ ‘ಕಣ್ಣಾ ಮುಚ್ಚೆ ಕಾಡೇ ಗೂಡೇ’ ಹೊಸ ಸೇರ್ಪಡೆ. ರಾಘವೇಂದ್ರ ರಾಜ್ಕುಮಾರ್ ಪ್ರಮುಖ ಪಾತ್ರದಲ್ಲಿರುವ ಚಿತ್ರ ಶೀಘ್ರದಲ್ಲಿ ತೆರೆಗೆ ಬರಲಿದೆ.

ಡಾರ್ಲಿಂಗ್ ಪ್ರೊಡಕ್ಷನ್ಸ್ ಅಡಿಯಲ್ಲಿ ಅನಿತಾ ವೀರೇಶ್ಕುಮಾರ್ ನಿರ್ಮಾಣ ಮಾಡಿದ್ದು, ಹಲವು ನಿರ್ದೇಶಕರ ಬಳಿ ಸಹಾಯಕರಾಗಿ ಅನುಭವ ಪಡೆದುಕೊಂಡಿರುವ ನಟರಾಜ್ ಕೃಷ್ಣೇಗೌಡ ಚಿತ್ರಕ್ಕೆ ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.

‘ಸಿನಿಮಾವು ಒಂದು ಕೊಲೆಯ ಸುತ್ತ ನಡೆಯುತ್ತದೆ. ಅದನ್ನು ಕಂಡು ಹಿಡಿಯಲು ಖಾಸಗಿ, ಸರ್ಕಾರಿ ಪಡೆ ಮುಂದೆ ಬರುತ್ತದೆ. ಇದರ ಮಧ್ಯೆ ಹುಡುಗಿಯೊಬ್ಬಳು ಸಮಸ್ಯೆಯಲ್ಲಿ ಸಿಲುಕಿಕೊಳ್ಳುತ್ತಾಳೆ. ಅಂತಿಮವಾಗಿ ಅಪರಾಧಿ ಸಿಗುತ್ತಾನಾ? ಆಕೆಯು ಕಷ್ಟದಿಂದ ಹೊರ ಬರುತ್ತಾಳಾ? ಎಂಬುದನ್ನು ಸಸ್ಪೆನ್ಸ್, ಥ್ರಿಲ್ಲರ್ ರೀತಿಯಲ್ಲಿ ತೋರಿಸಿದ್ದೇವೆ. ಸೆನ್ಸಾರ್ ಮುಗಿದಿದ್ದು ಜನವರಿಯಲ್ಲಿ ಚಿತ್ರ ಬಿಡುಗಡೆ ಆಲೋಚನೆಯಿದೆ’ ಎಂದರು ನಿರ್ದೇಶಕರು.

ರಾಘವೇಂದ್ರ ರಾಜ್ಕುಮಾರ್ ನಿವೃತ್ತ ವೈದ್ಯರಾಗಿ ಕಾಣಿಸಿಕೊಂಡಿದ್ದಾರೆ. ಅಥರ್ವ ಪ್ರಕಾಶ್ ನಾಯಕ. ತುಳು ಚಿತ್ರದಲ್ಲಿ ನಟಿಸಿದ್ದ ಪ್ರಾರ್ಥನಾ ನಾಯಕಿ. ಸಂತೋಷ್-ವಿಜಿತ್ಕೃಷ್ಣ ಸಂಗೀತ, ದೀಪಕ್ಕುಮಾರ್.ಜೆ.ಕೆ ಛಾಯಾಚಿತ್ರಗ್ರಹಣವಿದೆ. ಮಂಗಳೂರು, ಬೆಂಗಳೂರು ಮುಂತಾದೆಡೆ ಚಿತ್ರೀಕರಣಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.