ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಪ್ರಧಾನ ಸಿನಿಮಾ ‘ಸಾರಿ’ಯಲ್ಲಿ ರಾಗಿಣಿ

Last Updated 11 ನವೆಂಬರ್ 2021, 19:30 IST
ಅಕ್ಷರ ಗಾತ್ರ

ಆ್ಯಕ್ಷನ್, ಕ್ರೈಂ ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ‘ಸಾರಿ’(Sorry-Karma Returns) ಎಂಬ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಮತ್ತೆ ಚಂದನವನದಲ್ಲಿ ಬಣ್ಣಹಚ್ಚಿದ್ದಾರೆ. ಬ್ರಹ್ಮ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಮಹಿಳಾ ಪ್ರಧಾನ ಚಿತ್ರವಾಗಿದೆ.

ಕಿಸ್ ಇಂಟರ್‌ನ್ಯಾಷನಲ್ ಪ್ರೊಡಕ್ಷನ್‌ನಡಿ ನವೀನ್ ಕುಮಾರ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಮುಹೂರ್ತ ಮಾಚೋಹಳ್ಳಿಯಲ್ಲಿರುವ ‌ಲಕ್ಕೇನಹಳ್ಳಿ ಗ್ರಾಮದೇವತೆ ದೇವಸ್ಥಾನದಲ್ಲಿ ಕಳೆದ ಮಂಗಳವಾರ ನಡೆಯಿತು. ಸಕಲೇಶಪುರ, ಬೆಂಗಳೂರು ಹಾಗೂ ಕಗ್ಗಲೀಪುರದ ಸುತ್ತಮುತ್ತ ಚಿತ್ರದ ಶೂಟಿಂಗ್ ನಡೆಯಲಿದ್ದು, ಅಫ್ಜಲ್ ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಜಾನ್ ಜಾರ್ಜ್ ಹಾಗೂ ಜೈಕೃಪಲಾನಿ ಅವರ ಸಹನಿರ್ಮಾಪಕರು.

ಚಿತ್ರಕ್ಕೆ ರಾಜು ಎಮ್ಮಿಗನೂರು ಅವರ ಸಂಗೀತ, ರಾಜೀವ್ ಗಣೇಸನ್ ಅವರ ಛಾಯಾಗ್ರಹಣವಿದೆ. ಅಫ್ಜಲ್, ವಿ.ಜೆ.ಮನೋಜ್, ರಣವೀರ್, ಯುಕ್ತ ಪೆರ್ವಿ, ಪೂಜಾ ಪಾಟೀಲ್ ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT