ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ರೂಪಾಂತರ’ದಲ್ಲಿ ರಾಜ್ ಶೆಟ್ಟಿ

Published 2 ಜುಲೈ 2024, 21:55 IST
Last Updated 2 ಜುಲೈ 2024, 21:55 IST
ಅಕ್ಷರ ಗಾತ್ರ

ನಟ ರಾಜ್ ಬಿ ಶೆಟ್ಟಿ ‘ರೂಪಾಂತರ’ ಚಿತ್ರದೊಂದಿಗೆ ಬಂದಿದ್ದಾರೆ. ಇದರೊಂದಿಗೆ ‘ಒಂದು ಮೊಟ್ಟೆಯ ಕಥೆ’ ಚಿತ್ರತಂಡ ಮತ್ತೆ ಒಂದಾಗಿದೆ. ಮಿಥಿಲೇಶ್‌ ನಿರ್ದೇಶನದ ಈ ಚಿತ್ರಕ್ಕೆ ಸುಹಾನ್ ಪ್ರಸಾದ್ ಬಂಡವಾಳ ಹೂಡಿದ್ದಾರೆ. 

ರಾಜ್‌ ಹಿಂದಿನ ಚಿತ್ರಗಳಾದ ‘ಟೋಬಿ’, ‘ಸ್ವಾತಿಮುತ್ತಿನ ಮಳೆ ಹನಿಯೇ’ ಚಿತ್ರಮಂದಿರಗಳಲ್ಲಿ ಅಷ್ಟೆನು ಸದ್ದು ಮಾಡಿರಲಿಲ್ಲ. ಜೊತೆಗೆ ರಾಜ್‌ ‘ಟರ್ಬೊ’ ಚಿತ್ರದೊಂದಿಗೆ ಮಲಯಾಳಂನತ್ತ ಮುಖ ಮಾಡಿದ್ದರು. ಹೀಗಾಗಿ ‘45’ ಚಿತ್ರದ ಹೊರತಾಗಿ ಅವರ ಮುಂದಿನ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿತ್ತು. 

‘ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ, ಈ ಸಿನಿಮಾದ ಭಾಗವಾಗಿರುವುದು ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ರಾಜ್‌ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.

 4–5 ವರ್ಷಗಳ ಹಿಂದೆಯೇ ಪ್ರಾರಂಭಗೊಂಡಿದ್ದ ‘ರೂಪಾಂತರ’ ಚಿತ್ರವನ್ನು ರಾಜ್‌ ತಮ್ಮ ಲೈಟರ್ ಬುದ್ಧ ಫಿಲಮ್ಸ್ ಮೂಲಕ ಪ್ರೆಸೆಂಟ್‌ ಮಾಡುತ್ತಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಾಚಿತ್ರಗ್ರಹಣ, ಮಿಧುನ್ ಮುಕುಂದನ್ ಸಂಗೀತ ಚಿತ್ರಕ್ಕಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT