ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೀನೆ ನಿನ್ನ ಮಗುವಾಗಿ ನಮ್ಮ ಮಡಿಲಿಗೆ ಬಂದ್ಬಿಡು ಕಂದ’ ಚಿರಂಜೀವಿ ನೆನೆದ ಅರ್ಜುನ್‌

Last Updated 17 ಜೂನ್ 2020, 6:24 IST
ಅಕ್ಷರ ಗಾತ್ರ

ಬೆಂಗಳೂರು: ‘ನೀನೆ ನಿನ್ನ ಮಗುವಾಗಿ ನಮ್ಮ ಮಡಿಲಿಗೆ ಬಂದ್ಬಿಡು ಕಂದ. ಆ ಮಗುವಿನ ನಗುವಿನಲ್ಲಿ ನಿನ್ನನ್ನು ನೋಡಿಕೊಳ್ಳುತ್ತೀವಿ’ ಎಂದು ಸೋದರಳಿಯ ಚಿರಂಜೀವಿ ಸರ್ಜಾರನ್ನು ನೆನೆದುನಟ ಅರ್ಜುನ್‌ ಸರ್ಜಾ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ.

ನಟ ಚಿರಂಜೀವಿ ಸರ್ಜಾ ಅವರು ಅಗಲಿ ಇಂದಿಗೆ 11 ದಿನ ಕಳೆದಿದೆ. ಹೀಗಾಗಿ ಸರ್ಜಾ ಕುಟುಂಬದವರು ಕನಕಪುರ ರಸ್ತೆಯ ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್ ಹೌಸ್‍ನಲ್ಲಿ ಪೂಜೆ ಸಲ್ಲಿಸಿದ್ದಾರೆ.

ಪತ್ರದಲ್ಲಿ ಏನಿದೆ?: ಮನೆ ಮಗನಿಗೆ ಮನವಿ...
ನಿನ್ನ ಮನಸ್ಸಿಗೆ ಯಾರಾದರೂ ಬೇಜಾರು ಮಾಡಿದ್ರೆ, ನೀನು ಕೋಪ ಮಾಡಿಕೊಂಡು ಸ್ವಲ್ಪ ಮಾತಾಡಿದ್ರು, ನಮ್ಮನ್ನು ಬೈಕೊಂಡಿದ್ರು, ನಮಗೆ ಹೇಳದೆ ಯಾವುದಾದರೂ ಊರಿಗೆ ಹೋಗಿ ಬಂದಿದ್ರು ಪರವಾಗಿರುತ್ತಿರಲಿಲ್ಲ. ಆದರೆ ವಾಪಸ್ಸೇ ಬರಕ್ಕಾಗದಿರೋ ಅಂತ ಊರಿಗೆ ಹೋಗಿ ನಮಗೆಲ್ಲಾ ಅಂತ ಶಿಕ್ಷೆ ಕೊಟ್ಟಿದಿಯಲ್ಲಪ್ಪ.

ಕಣ್ಣು ಮುಚ್ಚಿದರೂ ನೀನೆ, ಕಣ್ಣು ತೆರೆದ್ರು ನೀನೆ, ನಿನ್ನ ನಗು ಮುಖ. ಸರಿ ಸ್ವಲ್ಪ ದಿನ ಆದ ಮೇಲೆ ಮರೆತು ಬಿಡುತ್ತಾರೆ ಎಂತ ನೀನು ತಿಳಿದುಕೊಂಡರೆ ಅದು ಸುಳ್ಳು. ನಮ್ಮೆಲ್ಲರಿಗೂ ಇದು ದೊಡ್ಡ ಗಾಯ. ಆರದೆ ಇರುವ ಅಂತ ಗಾಯ. ಯಾವಾಗಲೂ ನಮ್ಮ ಮನಸಲ್ಲಿ, ಹೃದಯದಲ್ಲೇ ಇರುತ್ತೀಯ ಕಂದ.

ನಿನ್ನ ತಾತ ನಿಂಗೆ ಚಿರಂಜೀವಿ ಅಂತ ಹೆಸರಿಟ್ಟರು. ಅದ್ಯಾವತ್ತು ಸುಳ್ಳಾಗಲ್ಲ. ನಿನ್ನ ಮಾತು, ನಿನ್ನ ಚಿರುನಗು, ನಿನ್ನ ನೆನಪು, ನಮ್ಮ ಸಂಬಂಧ ಯಾವಾಗಲೂ ಚಿರಂಜೀವಿಯಾಗೇ ಇರುತ್ತೆ ಬಂಗಾರ.

ಇದನ್ನೂ ಓದಿ...ಮಧುರ ನೆನಪು ಬಿಟ್ಟು ಹೋದ ಚಂದನವನದ ಹಸನ್ಮುಖಿ ನಟ ಚಿರಂಜೀವಿ ಸರ್ಜಾ

ಚಿರು…ಈ ನೋವನ್ನು ತಡೆದುಕೊಳ್ಳುವ ಶಕ್ತಿ ಆ ದೇವರು ನಿಮ್ಮ ಇಡೀ ಕುಟುಂಬಕ್ಕೆ ಕೊಡಬೇಕು ಅಂತ ಎಲ್ಲರು ಹೇಳುತ್ತಾರೆ. ಆದರೆ ಅದು ನಿನ್ನ ಕೈಯಲ್ಲೇ ಇದೆ. ಹೇಗೆ ಅಂದರೆ, ದಯವಿಟ್ಟು ನೀನೆ ನಿನ್ನ ಮಗುವಾಗಿ ನಮ್ಮ ಮಡಿಲಿಗೆ ಬಂದು ಬಿಡು ಕಂದ. ಆ ಮಗು ನಗುವಿನಲ್ಲೇ ನಿನ್ನ ನೀಡುತ್ತೀವಿ.

ನಾವೆಲ್ಲರೂ ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೀವಿ. ಆದರೆ ನಿನ್ನ ತುಂಬಾ ಪ್ರೀತಿಸುತ್ತೇವೆ ಎಂದು ಅರ್ಜುನ್ ಸರ್ಜಾ ಇಡೀ ಕುಟುಂಬದ ಪರವಾಗಿ ಪತ್ರದ ಮೂಲಕ ಚಿರುವಿಗೆ ನಮನ ಸಲ್ಲಿಸಿದ್ದಾರೆ.

ಈ ಪತ್ರವನ್ನು ನಟ ಧ್ರುವ ಸರ್ಜಾ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ‘Anna Love you forever’ ಎಂದು ಬರೆದುಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ಜೂನ್ 7 ರಂದು (ಭಾನುವಾರ) ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಜೂನ್ 8 ರಂದು ಕನಕಪುರ ರಸ್ತೆಯ ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT