ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂತಾರ’ದಲ್ಲಿ ನೀವು ನಟಿಸಬೇಕೇ, ಈಗಲೇ ಅರ್ಜಿ ಸಲ್ಲಿಸಿ

Published 12 ಡಿಸೆಂಬರ್ 2023, 10:40 IST
Last Updated 12 ಡಿಸೆಂಬರ್ 2023, 10:40 IST
ಅಕ್ಷರ ಗಾತ್ರ

‘ಕಾಂತಾರ–ಒಂದು ದಂತಕಥೆ’ಯ ಮೊದಲ ಅಧ್ಯಾಯದ ಚಿತ್ರೀಕರಣಕ್ಕೆ ನಟ ರಿಷಬ್‌ ಶೆಟ್ಟಿ ಸಿದ್ಧತೆ ಆರಂಭಿಸಿದ್ದು, ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಡಿಷನ್‌ ಕರೆಯಲಾಗಿದೆ. 

ಇತ್ತೀಚೆಗಷ್ಟೇ ಚಿತ್ರದ ಫಸ್ಟ್‌ ಲುಕ್‌ ಹಾಗೂ ಟೀಸರ್‌ ಬಿಡುಗಡೆಯಾಗಿತ್ತು. ಹೊಸ ಸಿನಿಮಾ ‘ಕಾಂತಾರ–ಒಂದು ದಂತಕಥೆ’ಯ ಪ್ರೀಕ್ವೆಲ್‌ ಆಗಿದ್ದು, ಕದಂಬರ ಕಾಲದಲ್ಲಿ ನಡೆಯುವ ಕಥೆಯನ್ನು ಹೊಂದಿದೆ. ಸಿನಿಮಾದ ಮುಹೂರ್ತದ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ್ದ ರಿಷಬ್‌, ‘ಕರಾವಳಿ ಭಾಗಕ್ಕೆ ಸಂಬಂಧಿಸಿದ ಕಥೆ ಇದು ಆಗಿರುವುದರಿಂದ ಇದೇ ಭಾಗದಲ್ಲಿ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. ಕನ್ನಡದ ಕಲಾವಿದರಿಗೆ ಮೊದಲ ಆದ್ಯತೆ. ಮತ್ತಷ್ಟು ಹೊಸ ಪ್ರತಿಭೆಗಳನ್ನು, ರಂಗಭೂಮಿ ಕಲಾವಿದರನ್ನು ಈ ಭಾಗದಲ್ಲಿ ಹೆಚ್ಚಾಗಿ ಪರಿಚಯಿಸಲಿದ್ದೇವೆ’ ಎಂದಿದ್ದರು. ಅದರಂತೆ ಇದೀಗ ಆಡಿಷನ್‌ ಕರೆಯಲಾಗಿದೆ. ಆಸಕ್ತರು kantara.filmಗೆ ಭೇಟಿ ನೀಡಿ ತಮ್ಮ ಮಾಹಿತಿಯನ್ನು ದಾಖಲಿಸಬಹುದು. ಡಿ.14ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.  

‘ಕಾಂತಾರ’ ಮೊದಲ ಅಧ್ಯಾಯ ಕನ್ನಡ, ಇಂಗ್ಲಿಷ್‌ ಸೇರಿದಂತೆ ಏಳು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. ಅಜನೀಶ್‌ ಲೋಕನಾಥ್‌ ಸಂಗೀತ ನಿರ್ದೇಶನ, ಅರವಿಂದ್‌ ಎಸ್‌.ಕಶ್ಯಪ್‌ ಅವರ ಛಾಯಾಚಿತ್ರಗ್ರಹಣ ಸೇರಿದಂತೆ ಮೊದಲ ಭಾಗದಲ್ಲಿ ಕಾರ್ಯನಿರ್ವಹಿಸಿದ್ದ ತಾಂತ್ರಿಕ ತಂಡವೇ ಪ್ರೀಕ್ವೆಲ್‌ನಲ್ಲೂ ಇರಲಿದೆ. ಡಿಸೆಂಬರ್‌ ಮಾಸಾಂತ್ಯದಲ್ಲಿ ತಂಡವು ಚಿತ್ರೀಕರಣಕ್ಕೆ ಇಳಿಯುವ ಸಾಧ್ಯತೆ ಇದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT