ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಟ್ಟುಹಬ್ಬದಂದು ನಿಮ್ಮೊಂದಿಗೆ ಇರಲಾರೆ: ಅಭಿಮಾನಿಗಳಿಗೆ ಯಶ್ ಸಂದೇಶ

Published 4 ಜನವರಿ 2024, 14:10 IST
Last Updated 4 ಜನವರಿ 2024, 14:10 IST
ಅಕ್ಷರ ಗಾತ್ರ

ಸಿನಿಮಾ ಕೆಲಸದಿಂದಾಗಿ ಬಿಡುವಿಲ್ಲದಂತಾಗಿದೆ. ಈ ಬಾರಿಯ ಹುಟ್ಟುಹಬ್ಬದ ದಿನ ಅಭಿಮಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಕಿಂಗ್‌ ಸ್ಟಾರ್‌ ಯಶ್‌ ತಿಳಿಸಿದ್ದಾರೆ.

ಕೆಜಿಎಫ್‌ ಸರಣಿಯ ಸಿನಿಮಾಗಳ ಬಳಿಕ ರಾಕಿಂಗ್‌ ಸ್ಟಾರ್ ಯಶ್ ಖ್ಯಾತಿ ದೇಶದಾದ್ಯಂತ ಹಬ್ಬಿದೆ. ಆದರೂ ಸಿಕ್ಕಸಿಕ್ಕ ಸಿನಿಮಾಗಳನ್ನೆಲ್ಲ ಒಪ್ಪಿಕೊಳ್ಳದೆ ಕತೆ ಆಯ್ಕೆಯಲ್ಲಿ ಜಾಣ ನಡೆ ಅನುಸರಿಸುವ ಯಶ್‌, ಹೊಸ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

'ಕೆಜಿಎಫ್‌' ಚಾಪ್ಟರ್‌ಗಳು ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಸದ್ದು ಮಾಡಿದ ನಂತರ ತುಸು ವಿರಾಮ ಪಡೆದಿದ್ದ ಅವರು, ಮುಂದಿನ ಸಿನಿಮಾ 'ಟಾಕ್ಸಿಕ್‌'ಗಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಚಿತ್ರೀಕರಣದಲ್ಲಿ ತೊಡಗಿರುವುದರಿಂದ ಜನವರಿ 8ರಂದು ತಮ್ಮ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಸಿಗಲು ಆಗುತ್ತಿಲ್ಲ ಎಂದು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಯಶ್‌ ಪೋಸ್ಟ್‌ನಲ್ಲೇನಿದೆ..

ಜನವರಿ 8..
ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನು, ನನ್ನ ಜೊತೆ ಖುದ್ದು ಇದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ.

ನನಗೂ ಅಷ್ಟೇ.. ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ

ಆದರೆ, ಸಿನಿಮಾದ ಕೆಲಸ ಬಿಡುವಿಲ್ಲದಂತೆ ಮಾಡಿದೆ. ಅನಿವಾರ್ಯವಾಗಿ ಪ್ರಯಾಣ ಮಾಡಬೇಕಿರುವುದರಿಂದ ಈ ಜನವರಿ 8ರಂದು ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ..

ನಿಮ್ಮ ಅಭಿಮಾನ ನನ್ನ ಅನುಪಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು..

ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ..

ನಿಮ್ಮ ಪ್ರೀತಿಯ
–ಯಶ್‌

abhilash sd.
abhilash sd.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT