ಭಾನುವಾರ, ಏಪ್ರಿಲ್ 2, 2023
24 °C

ಜನಾರ್ದನ ರೆಡ್ಡಿ ಮಗ ಕಿರೀಟಿ ನಟನೆಯ ಸಿನಿಮಾ ಶೂಟಿಂಗ್ ಸೆಟ್‌ಗೆ ಶಿವಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ, ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ನಟನೆಯ ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಸೆಪ್ಟೆಂಬರ್‌ 29ರಂದು ಈ ಚಿತ್ರದ ಶೀರ್ಷಿಕೆ ಬಿಡುಗಡೆ ನಡೆಯಲಿದೆ ಎಂದಿದೆ ಚಿತ್ರತಂಡ. ಅಂದು ನಟ ಕಿರೀಟಿ ಅವರ ಹುಟ್ಟುಹಬ್ಬ.

ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮ್ ಪ್ರೊಡಕ್ಷನ್ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದೆ. ರಾಧಾಕೃಷ್ಣ ರೆಡ್ಡಿ ಸಾರಥ್ಯದಲ್ಲಿ ತಯಾರಾಗುತ್ತಿರುವ ಈ ಚಿತ್ರ ಸಾಕಷ್ಟು ನಿರೀಕ್ಷೆಯನ್ನು ಹುಟ್ಟಿಸಿದೆ. ಈಗಾಗಲೇ ಬಿಡುಗಡೆ ಆಗಿರುವ ಕಿರೀಟಿ ಪ್ರವೇಶದ ಟೀಸರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. 

ಬೆಂಗಳೂರಿನ ನಾಗವಾರದ ಮ್ಯಾನತಾ ಟೆಕ್‌ಪಾರ್ಕ್‌ನಲ್ಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಶೂಟಿಂಗ್ ಸೆಟ್‌ಗೆ ನಟ ಶಿವರಾಜ್‌ಕುಮಾರ್‌ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಿರೀಟಿ ಹಾಗೂ ಜೆನಿಲಿಯಾ ಭಾಗದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಕೆಲ ಅಲ್ಲಿಯೇ ಸಮಯ ಕಳೆದ ಶಿವಣ್ಣ ಇಡೀ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಕೂಡ ಇದ್ದರು.

ಬಹುತೇಕ ಭಾಗ ಸಿನಿಮಾದ ಶೂಟಿಂಗ್ ಮುಗಿದಿದೆ. ಪ್ರೊಡಕ್ಷನ್ ಕೆಲಸಗಳು ಕೂಡ ಭರದಿಂದ ನಡೆಯುತ್ತಿವೆ. ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡುತ್ತಿದ್ದಾರೆ. ಕೆ.ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು