ಶುಕ್ರವಾರ, ಆಗಸ್ಟ್ 6, 2021
22 °C

ಫಾರ್ಮ್‌ಹೌಸ್‌ನಲ್ಲಿ ನೆರವೇರಿದ ನಟ ಚಿರಂಜೀವಿ ಸರ್ಜಾ ಅಂತಿಮ ಸಂಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಮನಗರ: ಬೆಂಗಳೂರು ಹೊರವಲಯದ ನೆಲಗುಳಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ನಟ ಚಿರಂಜೀವಿ ಸರ್ಜಾ ಅವರ ಅಂತಿಮ ಸಂಸ್ಕಾರ ಹಿಂದೂ ಸಂಪ್ರದಾಯದಂತೆ ನಡೆಯಿತು.

ಫಾರ್ಮ್‌ಹೌಸ್‌ ಒಳಗೆ ಸರ್ಜಾ ಕುಟುಂಬದವರು ಮತ್ತು ಆಪ್ತರಿಗಷ್ಟೇ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು. ಪತ್ನಿ ಮೇಘನಾ ಚಿರಂಜೀವಿ ಸರ್ಜಾ ಅವರನ್ನು ಅಪ್ಪಿ ಕಣ್ಣೀರಿಟ್ಟರು. ಬೃಂದಾವನದಾದ್ಯಂತ ಕಣ್ಣೀರ ಕಟ್ಟೆ ಒಡೆದಿತ್ತು.

ಕುಟುಂಬಸ್ಥರು, ಆಪ್ತರು ಮತ್ತು ಅಪಾರ ಅಭಿಮಾನಿಗಳು ಚಿರಂಜೀವಿ ಸರ್ಜಾರಿಗೆ ಅಂತಿಮ ವಿದಾಯ ಸಲ್ಲಿಸಿದರು.

ಫಾರ್ಮ್‌ಹೌಸ್ ಸುತ್ತ ಸಾವಿರಾರು‌ ಅಭಿಮಾನಿಗಳು ಜಮಾಯಿಸಿದ್ದರು. ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು