ಸಚಿನ್ ಶೆಟ್ಟಿ ನಿರ್ದೇಶನದ ‘ವಸಂತಕಾಲದ ಹೂಗಳು’ ಚಿತ್ರವು ಇಂದು(ನ.10) ತೆರೆಕಂಡಿದೆ. ಚಿತ್ರದಲ್ಲಿ ಸಚಿನ್ ರಾಠೋಡ್ ಮತ್ತು ರಾಧಾ ಭಗವತಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.
ಕಿರುತೆರೆಯ ಜನಪ್ರಿಯ ಧಾರಾವಾಹಿ ‘ರಾಮಾಚಾರಿ’ಯಲ್ಲಿ ನಾಯಕನ ತಂಗಿ ಪಾತ್ರದಲ್ಲಿ ನಟಿಸಿದ್ದ ರಾಧಾ ಭಗವತಿ ಈ ಸಿನಿಮಾ ಮೂಲಕ ಬೆಳ್ಳಿತೆರೆಗೆ ಹೆಜ್ಜೆ ಇಡುತ್ತಿದ್ದಾರೆ. ಚಿತ್ರವನ್ನು ನಟ ಧ್ರುವ ಸರ್ಜಾ ಅವರು ಪ್ರಸ್ತುತಪಡಿಸುತ್ತಿದ್ದಾರೆ.
ಅಶೋಕ ರಾಠೋಡ್ ಹಾಗೂ ಸಿದ್ದು ರಸೂರೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಟೀನೇಜ್ ಲವ್ ಸ್ಟೋರಿ ಹೊಂದಿರುವ ಈ ಚಿತ್ರ ಸಂಪೂರ್ಣವಾಗಿ ಬಿಜಾಪುರದಲ್ಲಿ ಚಿತ್ರೀಕರಣಗೊಂಡಿದೆ.